Advertisement
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಮುಂಗಾರು ಬೆಳೆ ನಷ್ಟದ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ರೈತರ ಸಾಲದ ಜೊತೆಗೆ ಕೃಷಿ ಕಾರ್ಮಿಕರ, ಸ್ತ್ರೀ ಶಕ್ತಿ ಸಂಘಗಳ, ನಿರುದ್ಯೋಗಿ ರೈತ ಮಕ್ಕಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು, ಬೆಳೆ ನಷ್ಟ ಪರಿಹಾರವನ್ನು ಕೆಲ ಬ್ಯಾಂಕ್‌ಗಳು ಸಾಲಕ್ಕೆ ವಜಾ ಮಾಡಿಕೊಳ್ಳುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು. ಬರ ಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕೆಂದು ಒತ್ತಾಯಿಸಿದರು.
ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಪಡಿಸಬೇಕು. ಗ್ರಾಮಗಳ ಜನರಿಗೆ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿವ ನೀರು ಒದಗಿಸಬೇಕು. ಗ್ರಾ.ಪಂ. ಮಟ್ಟದಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಅವಶ್ಯವಿದ್ದ ಕಡೆ ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು, ಉಚಿತ ಮೇವು ಒದಗಿಸಬೇಕು, ಕುಸಿದಿರುವ
ಅಂತರ್‌ಜಲಮಟ್ಟ ಹೆಚ್ಚಿಸಲು ಕೆರೆ, ಕಾಲುವೆಗಳ ದುರಸ್ತಿ ಹಾಗೂ ಹೂಳೆತ್ತುವ ಕೆಲಸಗಳನ್ನು ಕೈಗೊಳ್ಳಬೇಕು, ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಗುಣಮಟ್ಟ ಖಾತ್ರಿ ಪಡಿಸಬೇಕು ಎಂದು ಆಗ್ರಹಿಸಿದರು.
Related Articles
Advertisement