Advertisement
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಇದೇ ತಿಂಗಳ ಮೊದಲ ವಾರದಿಂದ ಸುಮಾರು 2 ವಾರಗಳು ಸುರಿದ ಮಳೆಯಿಂದಾಗಿ ಮತ್ತು ಮಹಾರಾಷ್ಟ್ರದ ಕೊಯ್ನಾ ಜಲಾಶಯ ಒಳಗೊಂಡಂತೆ ರಾಜ್ಯದ ಹಲವಾರು ಜಲಾಶಯಗಳ ನಿರ್ವಹಣೆಯ ಹೊಣೆ ಹೊತ್ತ ಸಿಬ್ಬಂದಿಯವರ ಬೇಜವಾಬ್ದಾರಿ ನಿರ್ವಹಣೆಯಿಂದ ಏಕಾಏಕಿ ನೀರು ಹೊರಬಿಟ್ಟ ಅಪಾರ ಪ್ರಮಾಣದ ನೀರು ಸುಮಾರು 4500 ಹಳ್ಳಿಗಳು ಜಲಾಘಾತಕ್ಕೆ ಒಳಗಾದವು ಮತ್ತು 14,82000 ರಷ್ಟು ಎಕರೆ ಪ್ರದೇಶ ಕೃಷಿ ಬೆಳೆ ಹಾನಿಯಾಗಿದೆ.
Related Articles
Advertisement
ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿ: ರಾಜ್ಯದಲ್ಲಿ ಬೆಳೆ ವಿಮೆ ಶೀಘ್ರದಲ್ಲಿ ಪಾವತಿಯಾಗಬೇಕು. ರಾಜ್ಯಾದ್ಯಂತ ಶಾಶ್ವತ ನೆರೆ ಮತ್ತು ಬರವಿರೋಧಿ ಕ್ರಮಗಳನ್ನು ಕೈಗೊಳ್ಳಬೇಕು. ಜಲಾಶಯಗಳು ಮತ್ತು ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಮುಂದಾಗಬೇಕು. ನೆರೆ ಸಂತ್ರಸ್ತರ ಪರಿಹಾರ ಮೊತ್ತವನ್ನು ವಸ್ತುನಿಷ್ಠವಾಗಿ ಪರಿಗಣಿಸಿ ವಿತರಿಸಬೇಕು. ಜಲಾಶಯಗಳ ಬೇಜಬಾಬ್ದಾರಿ ನಿರ್ವಹಣೆಯನ್ನು ಮಾಡಿ ಅಪಾರ ದುಃಖ ದುಮ್ಮಾನಗಳಿಗೆ ಕಾರಣರಾದವರ ಮೇಲೆ ಕಠಿಣಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಸಂಘದ ವತಿಯಿಂದ ಮನವಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಹರೀಶ್ ಮಾತನಾಡಿ, ನದಿ ಮೂಲಗಳನ್ನು ಹೊಂದಿರುವ ಜಿಲ್ಲೆಯಲ್ಲಿ ನದಿ ಪಾತ್ರಗಳ ಜಾಗವನ್ನು ಒಂದು ಕಿಲೋ ಮೀಟರ್‌ನಿಂದ 500 ಮೀಟರ್‌ಗೆ ಕಡಿತ ಮಾಡಿ, ನದಿ ಪಾತ್ರಗಳಲ್ಲಿ ರೆಸಾರ್ಟ್, ಐಶಾರಾಮಿ ಕಟ್ಟಡ, ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಕಡಿತಗೊಳಿಸಿದೆ. ಗಣಿಗಾರಿಕೆಗೆ ಅನುಮತಿ ನೀಡಲು ಪರೋಕ್ಷವಾಗಿ ಕಾರಣವಾಗುತ್ತಿದೆ.
2011ರ ಭೂಸ್ವಾಧೀನ ಕಾಯಿದೆ ತಿದ್ದುಪಡಿ ಮಾಡಿರುವ ಸಮಿಶ್ರ ಸರ್ಕಾರ ಪಾಪದ ಕೂಸಾಗಿದೆ. ಸ್ವಾಧೀನ ಪಡಿಸಿಕೊಂಡ ರೈತರ ಭೂಮಿಗೆ ಈ ಹಿಂದಿನ ಕಾಯಿದೆಯಂತೆ ನಾಲ್ಕು ಪಟ್ಟು ಪರಿಹಾರ ನೀಡಲು ಅವಕಾಶವಿದ್ದು, ತಿದ್ದುಪಡಿ ಕಾಯಿದೆಯಿಂದಾಗಿ ಕೇವಲ 1 ಪಟ್ಟು ಮಾತ್ರ ಪರಿಹಾರ ಸಿಗಲಿದೆ. ಇದು ರೈತರಿಗೆ ಮರಣಶಾಸನ ಆಗಲಿದೆ. ರಾಜ್ಯಪಾಲರು ಇದಕ್ಕೆ ಅಂಕಿತ ಹಾಕಬಾರದು. ಈಗಾಗಲೇ ಸಂಘದ ವತಿಯಿಂದ ಮನವಿ ಮಾಡಲಾಗಿದೆ ಎಂದು ಹೇಳಿದರು.
ತಾಲೂಕು ಉಪಾಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಹರೀಶ್, ಭೈರೇಗೌಡ, ಮುನಿಶಾಮಪ್ಪ, ಚಿಕ್ಕೇಗೌಡ, ನವೀನ್ ಹಾಗೂ ಜಿಲ್ಲೆಯ ನಾಲ್ಕು ತಾಲೂಕಿನ ರೈತ ಸಂಘದ ಪದಾಧಿಕಾರಿಗಳು ಇದ್ದರು.