ಚಿಕ್ಕಮಗಳೂರು: ವೇದಾವತಿ ನದಿ ಮೂಲವನ್ನು ಪುನಃಶ್ಚೇತನಗೊಳಿಸುವಂತೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಮುಳ್ಳಯ್ಯನಗಿರಿ ಸಂರಕ್ಷಿಸಿ ನದಿಮೂಲಗಳನ್ನು ರಕ್ಷಣೆ ಮಾಡಬೇಕೆಂದು ಅಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಧರಣಿ ನಡೆಸಿದರು.
ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲೂಕುಕೇಂದ್ರಗಳಿಂದ ಆಗಮಿಸಿದ್ದ ಆಗಮಿಸಿದ್ದ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಮುಖಂಡರು, ರೈತರು ಚಿಕ್ಕಮಗಳೂರುಜಿಲ್ಲಾ ಘಟಕದ ಮುಖಂಡರೊಂದಿಗೆ ನಗರದ ಆಜಾದ್ ಪಾರ್ಕ್ ಆವರಣದಲ್ಲಿ ಧರಣಿ ನಡೆಸಿ ಮುಳ್ಳಯ್ಯನಿಗಿರಿ ಶ್ರೇಣಿಯಲ್ಲಿನ ನದಿ ಮೂಲಗಳ ಸಂರಕ್ಷಣೆ ಸರ್ಕಾರ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಚಿತ್ರದುರ್ಗ ಜಿಲ್ಲಾ ಘಟಕದ ಮುಖಂಡ ಸಿದ್ದವೀರಪ್ಪ ಮಾತನಾಡಿ, ಮುಳ್ಳಯ್ಯನಗಿರಿ ಶ್ರೇಣಿಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸಿದ್ದು, ಯೋಜನೆಗೆ ಗಿರಿ ವ್ಯಾಪ್ತಿಯಲ್ಲಿನ ಸಾವಿರಾರು ಎಕರೆ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ. ನ್ಯಾಯಬದ್ಧವಾದ ಯೋಜನೆಗೆ ಹಿತಮಿತವಾಗಿ ಭೂಮಿ ಬಳಸಿಕೊಳ್ಳಲು ನಮ್ಮ ತಕರಾರಿಲ್ಲ. ಆದರೆ ಅಭಿವೃದ್ಧಿ ಹೆಸರಿನಲ್ಲಿ ಹೆಚ್ಚು ಭೂಮಿಯನ್ನುಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ. ಇಂತಹ ಅಭಿವೃದ್ಧಿಯಿಂದ ಇಲ್ಲಿನ ನದಿ ಮೂಲಗಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿದೆ ಎಂದರು.
ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಚಿಕ್ಕಮಗಳೂರು ಜಿಲ್ಲಾ ಘಟಕದ ಮುಖಂಡ ದುಗ್ಗಪ್ಪ ಗೌಡ ಮಾತನಾಡಿ, ಮುಳ್ಳಯ್ಯನಗಿರಿ ಶ್ರೇಣಿಯಲ್ಲಿನನದಿ, ನೀರಿನ ಮೂಲಗಳು ನಾಶವಾಗಲು ಸರ್ಕಾರ ಹಾಗೂ ಅರಣ್ಯ ಇಲಾಖೆಯ ಅವೈಜ್ಞಾನಿಕ ಯೋಜನೆಗಳೇ ಕಾರಣವಾಗಿದೆ ಎಂದರು. ಧರಣಿ ಬಳಿಕ ಜಿಲ್ಲಾಡಳಿತ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಕಟ್ಟಿಗೆರೆ ನಾಗರಾಜ್, ಪ್ರಧಾನ ಕಾರ್ಯದರ್ಶಿ ಡಿ.ಎಸ್. ಹಳ್ಳಿ ಮಲ್ಲಿಕಾರ್ಜುನ, ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಮುನಿನಿರ್ವಾಣ ಮೂರ್ತಿ, ಹದಿಗೆರೆ ಬೈಲಪ್ಪ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ಘಟಕದ ಮುಖಂಡರು ಇದ್ದರು.