Advertisement

ಮಹದಾಯಿ ಧರಣಿ, ರಾಜ್ಯಪಾಲರ ಭೇಟಿಗೆ ರೈತರ ಪಟ್ಟು, ಡಿಸಿಎಂ ಸಂಧಾನ ವಿಫಲ

09:54 AM Oct 22, 2019 | Team Udayavani |

ಬೆಂಗಳೂರು: ಮಹದಾಯಿ ಯೋಜನೆಯ ಅಧಿಸೂಚನೆ ಹೊರಡಿಸಲು ಆಗ್ರಹಿಸಿ ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ನಡೆಸುತ್ತಿರುವ ಹೋರಾಟ ಶನಿವಾರವೂ ಮುಂದುವರಿದಿದ್ದು ರಾಜ್ಯಪಾಲರ ಭೇಟಿಗೆ ಅವಕಾಶ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ.

Advertisement

ರಾಜ್ಯಪಾಲರ ಜತೆ ಚರ್ಚಿಸಲು ಅವಕಾಶ ನೀಡದ ಕಾರಣ ಅಹೋರಾತ್ರಿ ಧರಣಿ ಮುಂದುವರಿಸಿರುವ ರೈತರ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ನೀಡಿರುವ ಅಂತಿಮ ಗಡುವಿನ ಪ್ರಕಾರ ಡಿಸಿಎಂ ಕಾರಜೋಳ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭೇಟಿಯಾಗಿದ್ದಾರೆ.

ಮನವಿ ಪತ್ರವನ್ನು ನಮಗೆ ಕೊಡಿ, ನಾವು ರಾಜ್ಯಪಾಲರಿಗೆ ತಲುಪಿಸುತ್ತೇವೆ ಎಂಬ ಡಿಸಿಎಂ ಕಾರಜೋಳ ಅವರ ಮನವಿಯನ್ನು ರೈತರು ನಿರಾಕರಿಸಿದ್ದು, ತಮಗೆ ಖುದ್ದು ಭೇಟಿ ಮಾಡಲು ಅವಕಾಶ ಮಾಡಿಕೊಡಿ ಎಂದು ಪಟ್ಟು ಹಿಡಿದಿದ್ದಾರೆ.

ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಮಹದಾಯಿಗಾಗಿ ರೈತರು ಧರಣಿಯನ್ನು ಮುಂದುವರಿಸಿದ್ದಾರೆ.

ಡಿಸಿಎಂ ಸಂಧಾನ ವಿಫಲ:

Advertisement

ಮಹದಾಯಿ ವಿಚಾರದಲ್ಲಿ ರಾಷ್ಟ್ರಪತಿ, ರಾಜ್ಯಪಾಲರು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಡಿಸಿಎಂ ಗೋವಿಂದ ಕಾರಜೋಳ ಅವರು ಮನವೊಲಿಸಲು ನಡೆಸಿದ ಸಂಧಾನ ವಿಫಲವಾಗಿದೆ.

ರಾಜ್ಯಪಾಲರ ಭೇಟಿಗೆ ಅವಕಾಶ ಕೊಡಿಸುವಂತೆ ರೈತರು ಪಟ್ಟು ಹಿಡಿದಾಗ, ಕಾರಜೋಳ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ ರಾಜ್ಯಪಾಲರ ಭವನದಿಂದ ಯಾವುದೇ ಪ್ರತಿಕ್ರಿಯೆ ಬಾರದಿರುವುದನ್ನು ಗಮನಿಸಿದ ಗೋವಿಂದ ಕಾರಜೋಳ ಅವರು ಪ್ರತಿಭಟನಾ ಸ್ಥಳದಿಂದ ತೆರಳಿರುವುದಾಗಿ ವರದಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next