Advertisement

ಎತ್ತು ಚಕ್ಕಡಿಯೊಂದಿಗೆ ರೈತರ ಪ್ರತಿಭಟನೆ

08:44 PM Mar 05, 2021 | Team Udayavani |

ಬೆಳಗಾವಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ರೈತರು ಗುರುವಾರ ನಗರದ ಚನ್ನಮ್ಮ ವೃತ್ತದಲ್ಲಿ ಚಕ್ಕಡಿ, ಎತ್ತುಗಳನ್ನು ತಂದು ರಸ್ತೆತಡೆದು ಪ್ರತಿಭಟನೆ ನಡೆಸಿದರು.

Advertisement

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಚನ್ನಮ್ಮ ವೃತ್ತದಲ್ಲಿಎತ್ತುಗಳನ್ನು ತಂದಿದ್ದರಿಂದ ರಸ್ತೆ ಬಂದ್‌ ಆಗಿತ್ತು. ನಂತರ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳಿಂದರೈತರು ಸಂಕಷ್ಟಕ್ಕೆ ಸಿಲುಕಲಿದ್ದು, ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯಬೇಕು. ಭೂಸ್ವಾಧೀನಕಾಯ್ದೆ ಕೈ ಬಿಡಬೇಕು. ವಿದ್ಯುತ್‌ ಖಾಸಗೀಕರಣವನ್ನು ಸರ್ಕಾರ ಕೈಬಿಡಬೇಕು, ಎಪಿಎಂಸಿ ಕಾಯ್ದೆತಿದ್ದುಪಡಿಯನ್ನು ರದ್ದುಗೊಳಿಸಬೇಕು, ರೈತರಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಇಲ್ಲಿಯ ಹಲಗಾ-ಮಚ್ಛೆ ಬೆ„ಪಾಸ್‌ ರಸ್ತೆ ನಿಮಾಣ ಕಾಮಗಾರಿ ರದ್ದುಪಡಿಸಬೇಕು. ಫಲವತ್ತಾದ ಭೂಮಿಯನ್ನು ಕಸಿದುಕೊಳ್ಳಲು ಹುನ್ನಾರ ನಡೆಸಿರುವರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರಕ್ಕೆ ಸೂಚನೆ ನೀಡಬೇಕು. ಬೈಪಾಸ್‌ ರಸ್ತೆ ಕಾಮಗಾರಿ ಬಂದ್‌ ಮಾಡಿ ರೈತರಿಗೆಉಳುಮೆ ಮಾಡಲು ಅನುಕೂಲ ಮಾಡಿಕೊಡಬೇಕು.ನಮ್ಮ ಜಮೀನು ನಮಗೆ ಬಿಟ್ಟು ಕೊಡಬೇಕು ಎಂದು ಒತ್ತಾಯಿಸಿದರು.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2017-18ರಲ್ಲಿ ಪಡೆದಸಾಲ ಮನ್ನಾ ಮಾಡಬೇಕು. ಚಿಕ್ಕೋಡಿ ತಾಲೂಕಿನಜೋಡಕುರಳಿ ಗ್ರಾಮದ ಸರಹದ್ದಿನ ಜಮೀನಿನಲ್ಲಿಕ್ರಷರ್‌ ಮಷಿನ್‌ ಹಾಕಲು ಅನುಮತಿ ನೀಡಬಾರದು.ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಹಿಂದಿನಬಿಲ್‌ ರೈತರ ಖಾತೆಗೆ ಜಮಾ ಮಾಡಬೇಕು ಎಂದುಆಗ್ರಹಿಸಿದರು.ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನವರುರೈತರ ಮನೆಗೆ ಬಂದು ಸಾಲ ವಸೂಲಾತಿಮಾಡುವುದನ್ನು ನಿಲ್ಲಿಸಬೇಕು. ದೇಶಾದ್ಯಂತ ಏರಿಕೆಆಗಿರುವ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಕಡಿಮೆಮಾಡಬೇಕು ಎಂದು ಒತ್ತಾಯಿಸಿದರು.ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರಿ, ರಮೇಶಮಡಿವಾಳ, ರಾಜು ಮರವೆ, ಮಹಾದೇವಮಡಿವಾಳ, ರವಿ ಪಟೇಗಾರ, ಮಂಜು ಪರಗೌಡಸೇರಿದಂತೆ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next