Advertisement

ಬೆಂಗಳೂರಿನಲ್ಲಿ ರೈತರ ಬೃಹತ್‌ ಅರೆಬೆತ್ತಲೆ ಪ್ರತಿಭಟನೆ

09:52 AM Jun 05, 2019 | Team Udayavani |

ಬೆಂಗಳೂರು: ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ನಗರದಲ್ಲಿ ಸಾವಿರಾರು ರೈತರು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ಗಮನ ಸೆಳೆದರು.

Advertisement

ರಾಜ್ಯ ಕಬ್ಬು ಬೆಳೆಗಾರರಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗಿಯಾಗಿದ್ದರು. ರೈಲ್ವೇ ನಿಲ್ದಾಣದಿಂದ ವಿಧಾನಸೌಧದ ವರೆಗೆ ಪಾದಾಯಾತ್ರೆ ನಡೆಸಲು ಮುಂದಾಗಿದ್ದರು. ಪೊಲೀಸರು ಪ್ರತಿಭಟನಾ ಮೆರವಣಿಗೆಗೆ ತಡೆ ಒಡ್ಡಿದರು.

ಹಲವು ರೈತರು ಅರೆಬೆತ್ತಲೆಯಾಗಿ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಸಾಲ ಮನ್ನಾವಾದರೂ ಬ್ಯಾಂಕ್‌ಗಳಿಂದ ರೈತರಿಗೆ ಕಾಟ ತಪ್ಪಿಲ್ಲ. ರೈತರಿಗೆ ಹೊಸ ಮುಂಗಾರು ಕೃಷಿಗೆ ಸಾಲ ಸಿಗುತ್ತಿಲ್ಲ. ರೈತರ ಮೇಲಿನ ಎಲ್ಲಾ ಮೊಕದ್ದಮೆಗಳನ್ನು ಹಿಂಪಡೆಯುವುದಾಗಿ ಹೇಳಿದರೂ ಇನ್ನೂ ಕ್ರಮ ಜಾರಿಯಾಗಿಲ್ಲಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗಳನ್ನು ಮುಂದಿಡಲಾಯಿತು.

ರಾಜ್ಯದಲ್ಲಿ ಬರದ ಹಿನ್ನಲೆಯಲ್ಲಿ 8 ಲಕ್ಷಕ್ಕೂ ಹೆಚ್ಚು ಕೊಳವೆ ಬಾವಿಗಳು ನೀರಿಲ್ಲದೆ ಒಣಗಿ ಹೋಗಿದೆ.ಸರ್ಕಾರ ಕೊಳವೆ ಬಾವಿ ನಷ್ಟ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Advertisement

ಕಬ್ಬು ಬೆಳೆಗಾರರಿಗೆ 3 ಸಾವಿರ ಕೋಟಿ ರೂಪಾಯಿ ಹಣ ಬಾಕಿ ಇದೆ. ಕಾರ್ಖಾನೆ ಮಾಲೀಕರು 6 ತಿಂಗಳಾದರೂ ಬಾಕಿ ನೀಡಿಲ್ಲ.ಕಬ್ಬಿನ ಎಪ್‌ಆರ್‌ಪಿ ದರ ಏರಿಕೆ ಯಾಗಿರುವ ಹಿನ್ನಲೆಯಲ್ಲಿ ರೈತರಿಗೆ ತುಂಬಲಾರದ ನಷ್ಟವಾಗುತ್ತಿದೆ. 2018 -19 ನೇ ಸಾಲಿನ ಎಸ್‌ಎಪಿ ದರ ನಿಗದಿಗೊಳಿಸಿ ಕಬ್ಬಿನ ಉಪುತ್ಪನ್ನಗಳ ಲಾಭದಲ್ಲಿ ಹಂಚಿಕೆ ಮಾಡಿ ರೈತರಿಗೆ ಹೆಚ್ಚುವರಿ ಹಣ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next