Advertisement
ಜಿಲ್ಲಾ ಕೇಂದ್ರದಲ್ಲಿ ಬಂದ್‌ನ ಪ್ರಭಾವ ಕೇವಲ ಬೆಳಗ್ಗೆ 10 ಗಂಟೆವರೆಗೆ ಮಾತ್ರವಿತ್ತು. ತದ ನಂತರ ವ್ಯಾಪಾರ ವಹಿವಾಟು ನಡೆಯಿತು. ರೈತಸಂಘ ಹಾಗೂ ಹಸಿರು ಸೇನೆ, ಕನ್ನಡಪರ ಸಂಘಟನೆಗಳು ಪಂಜಿನ ಮೆರವಣೆಗೆ ನಡೆಸಿ ಕೇಂದ್ರ- ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
Related Articles
Advertisement
ರೈತರ ಧರಣಿ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಬಂದ್ ಯಶಸ್ವಿಯಾಗಿ ನಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ 234 ರಲ್ಲಿ ಮಾನವ ಸರಪಳಿ ನಿರ್ಮಿಸಿ ರೈತರು ಪ್ರತಿಭಟನೆ ನಡೆಯಿತು. ಈ ವೇಳೆ ಪೊಲೀಸರು, ರೈತ ಸಂಘದ ಮುಖಂಡರ ಮಧ್ಯೆ ಮಾತಿನ ಚಕಮುಖೀ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಿದ್ದ ರೈತರನ್ನು ಪಕ್ಕದಲ್ಲಿ ಎಳೆದು ತಂದಿದ್ದಾರೆ. ಇದೇ ರೀತಿಯಲ್ಲಿ ಜಂಗಮಕೋಟೆಯಲ್ಲಿ ರಾಜ್ಯ- ತಲದುಮ್ಮನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಯಲು ಯತ್ನಿಸಿದ ರೈತ ಮುಖಂಡರನ್ನು ಶಿಡ್ಲಘಟ್ಟ ಗ್ರಾಮಾಂ ತರ ಠಾಣೆ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ರೈತ ಸಂಘದ ಅಧ್ಯಕ್ಷ ಶಿಡ್ಲಘಟ್ಟ ಸಿಪಿಐ ಕಚೇರಿ ಮುಂದೆ ಧರಣಿ ನಡೆಸಿ ಬಂಧಿತ ರೈತರ ಬಿಡುಗಡೆಗೆ ಆಗ್ರಹಿಸಿದರು.
ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಆಗ ಮಿಸಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿ ಕೆಲವೊಂದು ನಿಬಂಧನೆ ಹಾಕಿ ಬಂಧಿಸಿದ ರೈತರನ್ನು ಬಿಡುಗಡೆ ಮಾಡಿದ್ದಾರೆ. ಶಿಡ್ಲಘಟ್ಟ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಎಂದಿ ನಂತೆ ನಿರಾತಂಕವಾಗಿ ವ್ಯಾಪಾರ ವಹಿವಾಟು ನಡೆಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ಪಿ ಮಿಥುನ್‌ಕುಮಾರ್ ಅವರ ನೇತೃತ್ವದಲ್ಲಿಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರೈತ ಹಾಗೂ ಕಾಂಗ್ರೆಸ್ ಮುಖಂಡ ಯಲುವಹಳ್ಳಿ ರಮೇಶ್, ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾಧ್ಯಕ್ಷ ರಾಮನಾಥ್, ಕಾರ್ಯದರ್ಶಿ ವೇಣು ಗೋಪಾಲ್, ರೈತ ಸಂಘಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ, ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಸಿಪಿಎಂ ಜಿಲ್ಲಾ ಧ್ಯಕ್ಷ ಮುನಿಕೃಷ್ಣಪ್ಪ, ಸಿಪಿಎಂ ಮುನಿವೆಂಕಟಪ್ಪ, ಕನ್ನಡಪರ ಸಂಘಟನೆ ರಾಮೇಗೌಡ ಮತ್ತಿತರರಿದ್ದರು.