Advertisement
ರೈತರ ‘ಚಕ್ಕಾ ಜಾಮ್’ ಪ್ರತಿಭಟನೆ ಹಿನ್ನಲೆಯಲ್ಲಿ ದೆಹಲಿ ಗಡಿ ಪ್ರದೇಶಗಳಲ್ಲಿ ಇಂದು (ಫೆ. 6 ) ಸಂಜೆಯಿಂದ 24 ಗಂಟೆಗಳವರೆಗೂ ಇಂಟರ್ನೆಟ್ ಬಂದ್ ಮಾಡಲಾಗಿದೆ.
Related Articles
Advertisement
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಇಂದು ರೈತರು ದೇಶಾದ್ಯಂತ ಚಕ್ಕಾ ಜಾಮ್ ಪ್ರತಿಭಟನೆಗೆ ಕರೆ ನೀಡಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಲು ನಿರ್ಧರಿಸಿದ್ದರು. ದೆಹಲಿ, ಉತ್ತರಪ್ರದೇಶ್, ಉತ್ತರಖಾಂಡ್ ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳಲ್ಲಿ ಹೆದ್ದಾರಿಗಳನ್ನು ಬಂದ್ ಮಾಡಲಾಗಿತ್ತು ಎಂದು ವರದಿಯಾಗಿದೆ.
ಏತನ್ಮಧ್ಯೆ ರೈತರ ಹೋರಾಟದ ಹಿಂದೆ ಅಂತರಾಷ್ಟ್ರೀಯ ಪಿತೂರಿ ಎಂಬ ಆರೋಪವನ್ನು ರೈತ ನಾಯಕ ರಾಕೇಶ್ ಟಿಕಾಯತ್ ಅಲ್ಲಗಳೆದಿದ್ದು, ಯಾವ ಅಂತರಾಷ್ಟ್ರೀಯ ಪಿತೂರಿ ? ಯಾವ ಮಾನಹಾನಿ ? ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಬೆಂಬಲ ಬೆಲೆ ಪ್ರಕ್ರಿಯೇ ಇಲ್ಲದಿರುವುದು ಅತೀ ದೊಡ್ಡ ಪಿತೂರಿ ಎಂದು ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕೊಲೆಗೆ ಕಾರಣವಾಯ್ತು 20 ರೂ. ಇಡ್ಲಿ: ತಳ್ಳುಗಾಡಿ ವ್ಯಾಪಾರಿಯ ಕೊಲೆಗೈದ ಮೂವರು