Advertisement

ರೈತರ ಸ್ವಾಭಿಮಾನ ಬದುಕಿಗೆ ಪ್ರೋತ್ಸಾಹ: ನಾಗರಾಜ್‌

09:24 PM Apr 10, 2019 | Team Udayavani |

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರು ರೈತರಪರವಾಗಿ ಹೈನುಗಾರಿಕೆಗೆ ಅತ್ಯಂತ ಪ್ರೋತ್ಸಾಹ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಹೈನುಗಾರಿಕೆ ರೈತರ ಸ್ವಾಭಿಮಾನದ ಬದುಕು ಕಟ್ಟುವಲ್ಲಿ ಹೆಗ್ಗಡೆಯವರ ಕೊಡುಗೆ ಅಪಾರ ಎಂದು ರಾಜ್ಯ ಹಾಲು ಮಹಾಮಂಡಳಿಯ ಅಧ್ಯಕ್ಷ ಬಿ. ನಾಗರಾಜು ತಿಳಿಸಿದರು.

Advertisement

ಶ್ರೀಕ್ಷೇತ್ರ ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ವಿವಿಧ ಹಾಲು ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿಗಳ ವಿಚಾರ ವಿಮರ್ಶೆ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಅತ್ಯಂತ ಕಷ್ಟದ ಕಾಲದಲ್ಲಿದ್ದಾಗ 4,000ಕ್ಕೂ ಹೆಚ್ಚು ಹಾಲು ಉತ್ಪಾದಕ ಸಹಕಾರಿ ಸಂಘಗಳ ಕಟ್ಟಡಗಳಿಗೆ 18 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿರುವುದೇ ಇದಕ್ಕೆ ಸಾಕ್ಷಿ. ಅದಕ್ಕಾಗಿ ರಾಜ್ಯದ ಹೈನುಗಾರಿಕೆ ರೈತರ ಮತ್ತು ಒಕ್ಕೂಟದ ಪರವಾಗಿ ಹೆಗ್ಗಡೆಯವರನ್ನು ಅಭಿನಂದಿಸುತ್ತೇನೆ ಎಂದರು.

ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ಮಾತನಾಡಿ, ರೈತರಿಗೆ ಒಕ್ಕೂಟ ದಿಂದ ನೀಡುವ ಸಹಕಾರ ಅಭಿನಂದ ನೀಯ. ಎಲ್ಲ ಹಾಲು ಉತ್ಪಾದಕ ಸಹಕಾರ ಸಂಘಗಳು ಅತ್ಯಂತ ಪಾರದರ್ಶಕತೆ ಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು ಮಾದರಿಯಾಗಿದೆ. ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷರ ಸೇವೆ ಅಭಿನಂದನೀಯ ಎಂದರು.

ಯೋಜನೆಯ ಸಮುದಾಯ ಅಭಿವೃದ್ಧಿ ನಿರ್ದೇಶಕ ಬಿ. ಜಯರಾಮ ನೆಲ್ಲಿತ್ತಾಯ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಮಹಾ ಮಸ್ತಕಾಭಿಷೇಕ ಸಮಯದಲ್ಲಿ ವಿವಿಧ ಹಾಲು ಉತ್ಪಾದಕ ಸಹಕಾರಿ ಸಂಘಗಳಿಂದ, ರಾಜ್ಯದ ಹಾಲು ಒಕ್ಕೂಟದಿಂದ ನೀಡಿದ ಸಹಕಾರ ಪ್ರಶಂಸನೀಯ. ಈ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರಾಜ್ಯದ ಹಾಲು ಒಕ್ಕೂಟ ಮಹಾಮಂಡಳದ ಅಧ್ಯಕ್ಷರಿಗೆ, ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next