Advertisement

ರೈತರು ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಲಿ

11:33 AM Jun 09, 2019 | Team Udayavani |

ಹಾವೇರಿ: ಸಕಾಲದಲ್ಲಿ ಮಳೆ ಬಾರದೆ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕಾಲಕಾಲಕ್ಕೆ ಮಳೆ ಬಂದು ರೈತರು ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು ಹಾಗೂ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

Advertisement

ತಾಲೂಕಿನ ಕರ್ಜಗಿ ರೈತ ಸಂಪರ್ಕ ಕೇಂದ್ರದಲ್ಲಿ 2019-20ನೇ ಸಾಲಿನ ಮುಂಗಾರು ಹಂಗಾಮಿನ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೃಷಿ ಇಲಾಖೆಯಿಂದ ದೊರೆಯುವ ಎಲ್ಲ ಪರಿಕರಗಳನ್ನು ರೈತರ ಅಗತ್ಯಕ್ಕೆ ಅನುಗುಣವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕು. ಮಳೆಯ ವಿಳಂಬವನ್ನು ಎದುರಿಸುತ್ತಿರುವ ರೈತರು ಬೀಜ ಗೊಬ್ಬರಕ್ಕಾಗಿ ತೊಂದರೆ ಅನುಭವಿಸಬಾರದು ಹಾಗೂ ಕೃಷಿ ಇಲಾಖೆ ಸೌಲಭ್ಯಗಳು ರೈತರಿಗೆ ಸರಳವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಬಿ. ಮಾತನಾಡಿ, ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಮಳೆಯ ಅಭಾವವಿರುವ ಕಾರಣ ರೈತರು ಬೆಳೆವಿಮೆ ಕಡ್ಡಾಯವಾಗಿ ಮಾಡಿಸಬೇಕು. ಸಾವಯವ ಕೃಷಿಯ ಪದ್ಧತಿ ಆಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸದೃಢರಾಗಲು ಸಲಹೆ ನೀಡಿದರು. ರೈತರಿಗೆ ಮಣ್ಣು ಆರೋಗ್ಯ ಚೀಟಿಗಳನ್ನು ವಿತರಿಸಲಾಗುತ್ತಿದ್ದು, ಆದರ ಅನುಸಾರ ರಸಗೊಬ್ಬರವನ್ನು ಬಳಕೆ ಮಾಡಬೇಕೆಂದು ಹೇಳಿದರು. ಸಹಾಯಕ ಕೃಷಿ ನಿರ್ದೇಶಕ ಕರಿಯಲ್ಲಪ್ಪ ಡಿ.ಕೆ. ಪ್ರಾಸ್ತಾವಿಕ ಮಾತನಾಡಿ, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗಿದ್ದು, ಯಾವುದೇ ರೀತಿ ಕೊರೆತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ರೈತರಿಗೆ ಬೇಕಾಗುವಷ್ಟು ರಸಗೊಬ್ಬರದ ದಾಸ್ತಾನಿದ್ದು ಯಾವುದೇ ರೀತಿ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದರು.

ತಾಲೂಕಿನಲ್ಲಿ ಒಟ್ಟು 16 ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ. ಅದರಲ್ಲಿ ಮೂರು ಹೋಬಳಿಯ ರೈತ ಸಂಪರ್ಕ ಕೇಂದ್ರಗಳು ಇನ್ನುಳಿದ 13 ಉಪ ಕೇಂದ್ರಗಳನ್ನು ತೆರೆದು ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ ವಿತರಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ನಿರ್ದೇಶಕ ಬಸವರಾಜ ಡೊಂಕಣ್ಣನವರ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಶಿವಪುತ್ರಪ್ಪ ನೀಲಪ್ಪ ಶಿವಣ್ಣನವರ, ಎಪಿಎಂಸಿ ಮಾಜಿ ಅಧ್ಯಕ್ಷಕ ಸಂಗಮೇಶ ಸುಳ್ಳಳ್ಳಿ, ಕೃಷಿಕ ಸಮಾಜದ ನಿರ್ದೇಶಕ ಗುಡ್ಡಪ್ಪ ಮಾಳಶೆಟ್ಟಿ, ನಾಗರಾಜ ವಿಭೂತಿ, ತಾಲೂಕು ಕೃಷಿಕ ಸಮಾಜ ಮತ್ತು ಮುಖಂಡ ನಿಂಗಣ್ಣ ಮೈಲಾರ, ಅಧಿಕಾರಿಗಳಾದ ಡಿ.ಪಿ. ದೊಡ್ಡಮನಿ, ‘ಆತ್ಮ’ ಘಟಕದ ಅಧಿಕಾರಿ ಚಂದ್ರಗೌಡ ಹೊಸಗೌಡ್ರ ಮತ್ತು ರೈತ ಅನುವುಗಾರರು, ರೈತ ಬಾಂಧವರು, ಕೃಷಿ ಅಧಿಕಾರಿ ಕೊಟ್ರೇಶ್‌ ಗೆಜ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next