ಕಾಶ್ಮೀರ ; ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ರೈತ ಪುತ್ರನ ತನ್ವೀರ್ ಅಹ್ಮದ್ ಖಾನ್, ಕೇಂದ್ರ ಸಾರ್ವಜನಿಕ ಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ಪ್ರತಿಷ್ಠಿತ ಭಾರತೀಯ ಆರ್ಥಿಕ ಸೇವೆಗಳ (ಐಇಎಸ್) ಪರೀಕ್ಷೆಯಲ್ಲಿ ಎರಡನೇ ರ್‍ಯಾಂಕ್ ಗಳಿಸಿದ್ದಾರೆ.
ತ್ವನೀರ್ ಕಾಶ್ಮೀರದಿಂದ ೮೦ ಕಿಲೋಮೀಟರ್ ದೂರದಲ್ಲಿರುವ ದಕ್ಷಿಣ ಕಾಶ್ಮೀರದ ನೈಜೀನ್‌ಪೋರಾ ಕುಂಡ್ ಎಂಬಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಮುಗಿಸಿ ಬಳಿಕ ವಾಲ್ಟೆಂಗೂದಲ್ಲಿ ಪ್ರೌಢ ಶಾಲೆ ಮುಗಿಸಿ 2016 ರಲ್ಲಿ ಅನಂತನಾಗ್ ನಲ್ಲಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕಲಾ ಪದವಿಯನ್ನು ಪಡೆದರು.
ಖಾನ್ ಮೊದಲಿನಿಂದಲೂ ಚುರುಕಿನ ವಿದ್ಯಾರ್ಥಿಯಾಗಿದ್ದು, ಕಾಶ್ಮೀರ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯಲ್ಲಿ ಮೂರನೇ ಶ್ರೇಯಾಂಕ ಪಡೆದಿದ್ದಾರೆ ಮತ್ತು ಕಾಶ್ಮೀರ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶವನ್ನು ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ :ಮೀನು, ಕೋಳಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಬೇಕು ಎಂದ ಬಿಜೆಪಿ ಸಚಿವ!
ಖಾನ್ ತನ್ನ ವಿದ್ಯಾಭ್ಯಾಸ ಮುಂದುವರೆಸಿ ಸ್ನಾತಕೋತ್ತರ ಪದವಿಯ ಕೊನೆಯ ವರ್ಷದಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಅನ್ನು ಪಡೆಯುವ ಮೂಲಕ ಮತ್ತೊಂದು ಸಾಧನೆಯನ್ನು ಮಾಡಿದ್ದೇನೆ ಎಂದು ಖಾನ್ ಹೇಳಿದರು. ಜೆಆರ್‌ಎಫ್ ಫೆಲೋ ಆಗಿದ್ದ ಅವರು, ಕೋಲ್ಕತ್ತಾದ ಇನ್‌ಸ್ಟಿಟ್ಯೂಟ್ ಆಫ್ ಡೆವಲಪ್‌ಮೆಂಟ್ ಸ್ಟಡೀಸ್, ಮಾಸ್ಟರ್ಸ್ ಇನ್ ಫಿಲಾಸಫಿ (ಎಂಫಿಲ್) ಗೆ ಡೆವಲಪ್‌ಮೆಂಟ್ ನ ಅಧ್ಯಯನ ನಡೆಸಿದರು.