ನವ ದೆಹಲಿ : ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಪ್ರತಿದಿನ ಸಂಸತ್ ಭವನದ ಎದುರುಗಡೆ ನಿತ್ಯ ನಿರಂತರ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಜುಲೈ 19 ರಿಂದ ಆಗಸ್ಟ್ 13 ರ ತನಕ ಸಂಸತ್ ಮುಂಗಾರು ಅಧಿವೇಶನ ನಡೆಯಲಿದ್ದು, ಸಂಯುಕ್ತ ಕಿಸಾನ್ ಮೋರ್ಚಾದ ಅಡಿಯಲ್ಲಿ ಇರುವ ಹಲವು ರೈತ ಸಂಘಟನೆಗಳು ಪ್ರತಿಭಟಿಸುವುದಾಗಿ ಘೋಷಣೆ ಮಾಡಿದ್ದು, ಮುಂಗಾರು ಅಧಿವೇಶನದ ಸಂದರ್ಭದಲ್ಲಿ 200ಕ್ಕೂ ಹೆಚ್ಚು ಮಂದಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿವೆ.
ಇದನ್ನೂ ಓದಿ : ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪುತ್ತೂರು ಪೊಲೀಸರು
ರೈತರ ಉತ್ಪಾದನೆ ವ್ಯಾಪಾರ ಹಾಗೂ ವಾಣಿಜ್ಯ ಕಾಯ್ದೆ 2020, ರೈತರ ಬೆಂಬಲ ಬೆಲೆ ಹಾಗೂ ಕೃಷಿ ಸೇವೆಗಳ ಕಾಯ್ದೆ 2020, ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ 2020 ಗಳನ್ನು ಕೋವಿಡ್ ಸೋಂಕಿನ ಮೊದಲ ಅಲೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದೆ.
ಕೇಂದ್ರ ಸರ್ಕಾರದ ಈ ನೂತನ ಮೂರು ಕೃಷಿ ಕಾನೂನುಗಳ ವಿರುದ್ದ ದೇಶಾದ್ಯಂತ ಬೃಹತ್ ಮಟ್ಟದಲ್ಲಿ ಪ್ರತಿಭಟನೆಗಳು ನಡೆದರೂ ಕೂಡ ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ವಾಪಾಸ್ ಪಡೆಯಲಿಲ್ಲ. ಆದರೇ, ಕೇಂದ್ರ ಕಾನೂನಿಲ್ಲಿ ಒಂದಿಷ್ಟು ಬದಲಾವಣೆ ಮಾಡಲು ಸಿದ್ಧವೆಂದು ಹೇಳಿದ್ದರೂ ಕೂಡ ರೈತ ಸಂಘಗಳು ಒಪ್ಪಲಿಲ್ಲ. ಪ್ರತಿಭಟನೇ ಇಂದೂ ಕೂಡ ನಡೆಯುತ್ತಿದ್ದು, ಸಂಸತ್ ಅಧಿವೇಶನದ ಸಂದರ್ಭದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಮುಂದಾಗಿವೆ.
ಇದನ್ನೂ ಓದಿ : 750 ಆಮ್ಲಜನಕ ಸಾಂದ್ರಕ ನೀಡಿದ ಗೀವ್ ಇಂಡಿಯಾ : ಸಿಎಂ, ಡಿಸಿಎಂಗೆ ಹಸ್ತಾಂತರ