Advertisement
ಮುಂಬೈನ ಆಜಾದ್ ಮೈದಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಒಗ್ಗಟ್ಟನ್ನು ತೋರಿಸುವುದಕ್ಕಾಗಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಶರದ್ ಪವಾರ್ ಕಿಡಿ ಕಾರಿದ್ದಾರೆ.
Related Articles
Advertisement
ಓದಿ: ಸರ್ಕಾರದಿಂದ ರೈತರಿಗೆ ಅನ್ಯಾಯ
ಮಸೂದೆಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳು ಒತ್ತಾಯಿಸಿದರೂ ಕೃಷಿ ಕಾನೂನುಗಳನ್ನು ಸಂಸತ್ತಿನಲ್ಲಿ ವಿವರವಾದ ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. “ಮಸೂದೆಗಳನ್ನು ಆಯ್ಕೆ ಸಮಿತಿಯ ಮೂಲಕ ಚರ್ಚಿಸಬಹುದಿತ್ತು, ಆದರೆ ಅದು ಕೂಡ ಆಗಲಿಲ್ಲ” ಕೃಷಿ ಕಾನೂನುಗಳ ವಿರುದ್ಧ ರಾಜ್ಯದ ರೈತರು ಮೆಮೊರೆಂಡಮ್ ಸಲ್ಲಿಸಬೇಕಾದ ಸಮಯದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಗೋವಾಕ್ಕೆ ತೆರಳಿರುವುದನ್ನು ಉಲ್ಲೇಖಿಸಿ, ಕೋಶ್ಯರಿ ಅವರಿಗೆ ರೈತರಿಗೆ ಸಮಯ ಕೊಡಲು ಆಗುವುದಿಲ್ಲ. ಆದರೆ, ಬಾಲಿವುಡ್ ನಟಿ ಕಂಗನಾ ರನೌತ್ ಅವರನ್ನು ಭೇಟಿ ಮಾಡಲು ಸಮಯವಿದೆ ಎಂದು ಕೋಶ್ಯರಿ ವಿರುದ್ಧ ಪವಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ, ಮಹಾರಾಷ್ಟ್ರದ ಕಂದಾಯ ಸಚಿವ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಾಲಾ ಸಾಹೇಬ್ ಥೋರತ್, ಅಖಿಲ ಭಾರತ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಮತ್ತು ಇತರರು ಉಪಸ್ಥಿತರಿದ್ದರು.
ಓದಿ: ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ