Advertisement

Farmers ಒಕ್ಕಲು ಎಬ್ಬಿಸುವುದಿಲ್ಲ: ಸಚಿವ ಈಶ್ವರ ಖಂಡ್ರೆ ಭರವಸೆ

11:44 PM Jan 23, 2024 | Team Udayavani |

ಮೈಸೂರು: ಅರಣ್ಯ ಸಂರಕ್ಷಣ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

Advertisement

ಜಲ ದರ್ಶಿನಿ ಅತಿಥಿಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತಾಡಿದ ಅವರು, ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಒತ್ತುವರಿ ಮಾಡಿದ್ದು, ಅಂತಹವರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.

ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆ ಸರಕಾರದ ಹೊಣೆಯಾಗಿದೆ. ಅರಣ್ಯ ಭೂಮಿ ಕ್ಷೀಣಿಸಿದರೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next