Advertisement

ಫಸಲ್‌ ಬಿಮಾ : ರೈತರ ಗುರುತಿಸಿ

05:47 PM Jun 23, 2021 | Team Udayavani |

ಕಲಬುರಗಿ: ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಲಾಭ ಪಡೆದುಕೊಳ್ಳುವಂತೆ ಬೀದರ್‌ ಸಂಸದ ಭಗವಂತ ಖೂಬಾ ರೈತರಿಗೆ ಮನವಿ ಮಾಡಿದ್ದಾರೆ. ನಗರದ ಐವಾನ್‌-ಇ-ಶಾಹಿ ಅತಿಥಿಗೃಹದಲ್ಲಿ ಮಂಗಳವಾರ ಕಲಬುರಗಿ ಜಿಲ್ಲೆಯ ಬ್ಯಾಂಕ್‌ ಮ್ಯಾನೇಜರ್‌ ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

Advertisement

ರೈತರಿಗೆ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ಬಗ್ಗೆ ಮಾಹಿತಿ ನೀಡಿ, ಅದರ ಪ್ರಯೋಜನ ತಿಳಿಸಬೇಕು. ಈ ಯೋಜನೆ ಲಾಭ ಪಡೆಯುವಂತಾಗಲು ನೋಂದಣಿಯಾಗದ ರೈತರನ್ನು ಗುರುತಿಸಿ, ನೋಂದಣಿ ಮಾಡಿಸಬೇಕು ಎಂದು ಅ ಧಿಕಾರಿಗಳಿಗೆ ಸೂಚನೆ ನೀಡಿದರು. ಬೀದರ ಲೋಕಸಭೆ ವ್ಯಾಪ್ತಿಯಲ್ಲಿರುವ ಆಳಂದ ಮತ್ತು ಚಿಂಚೋಳಿ ತಾಲೂಕುಗಳಲ್ಲಿ ಕಳೆದ ವರ್ಷ ಅತೀ ಕಡಿಮೆ ಫಸಲ್‌ ಬಿಮಾ ಯೋಜನೆಯಲ್ಲಿ ರೈತರ ನೋಂದಣಿ ಮಾಡಲಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ತಾಲೂಕಿನ ಮ್ಯಾನೇಜರ್‌ಗಳು ಹೆಚ್ಚು ಶ್ರಮವಹಿಸಿ ರೈತರ ನೋಂದಣಿ ಮಾಡಿಸಬೇಕು ಎಂದು ತಾಕೀತು ಮಾಡಿದರು. ಜಿಲ್ಲೆ ಮತ್ತು ತಾಲೂಕಿನ ಎಲ್ಲ ಬ್ಯಾಂಕ್‌ಗಳ ಮುಂದೆ ರೈತರಿಗೆ ಫಸಲ ಬಿಮಾ ಯೋಜನೆ ನೋಂದಣಿ ಮಾಡಲಾಗುವುದು ಎನ್ನುವ ಫಲಕ ಹಾಕಬೇಕು. ಹಳ್ಳಿಗಳಲ್ಲಿ ಯೋಜನೆ ಮೇಳ ಆಯೋಜಿಸಬೇಕು.

ಪ್ರತಿ ತಾಲೂಕಿನಲ್ಲಿ ಎರಡು ವಾಹನಗಳ ಮೂಲಕ ಪ್ರಚಾರ ಮಾಡಬೇಕು. ಇನ್ನಿತರ ಜಾಗೃತಿ ಕಾರ್ಯಕ್ರಮಗಳ ಮೂಲಕ ಯೋಜನೆ ಉದ್ದೇಶ, ಲಾಭವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು. ಪ್ರತಿ ಮನೆ ಬಾಗಿಲಿಗೆ ಕರಪತ್ರ ನೀಡುವ ಮೂಲಕ ಮಾಹಿತಿ ನೀಡಿ ಅ ಧಿಕ ರೈತರು ಈ ಯೋಜನೆಯ ಲಾಭ ಪಡೆಯುವಂತೆ ಬ್ಯಾಂಕ್‌ಗಳ ಸಿಬ್ಬಂದಿ ಕ್ರಮ ನಿರ್ವಹಿಸಬೇಕು. ಪ್ರತಿ ಬ್ಯಾಂಕ್‌ನ ಶಾಖೆಯಲ್ಲಿ ಗ್ರಾಹಕರಾಗಿರುವ ರೈತರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಫಸಲ ಬಿಮಾ ಯೋಜನೆ ಬಗ್ಗೆ ಮಾಹಿತಿ ನೀಡಿ, ಅವರುಗಳು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಸೂಕ್ತ ಮಾಹಿತಿ ನೀಡಬೇಕು ಎಂದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸೂಗೂರು, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಇಂತೆಸಾರ್‌ ಹುಸೇನ್‌, ಡಿಸಿಸಿ ಬ್ಯಾಂಕ್‌ ಜನರಲ್‌ ಮ್ಯಾನೇಜರ್‌ ಮುತ್ತುರಾಜ ಹಾಗೂ ತಾಲೂಕಿನ ವಿವಿಧ ಬ್ಯಾಂಕ್‌ ಮ್ಯಾನೇಜರ್‌ಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next