Advertisement

ಫಸಲ್‌ ವಿಮೆಯಲ್ಲಿ ಭತ್ತ : ಆ. 16ರೊಳಗೆ ನೋಂದಾಯಿಸಲು ಸೂಚನೆ

11:34 PM Jun 09, 2022 | Team Udayavani |

ಮಂಗಳೂರು : ಈ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರûಾ ಪ್ರಧಾನಮಂತ್ರಿ ಫಸಲ್‌ ವಿಮಾ ಯೋಜನೆಯಡಿ ಭತ್ತ ನೋಂದಾಯಿತ ಬೆಳೆಯಾಗಿದ್ದು, ರೈತರು ಆ. 16ರೊಳಗೆ ಹೆಸರು ನೋಂದಾಯಿಸಬೇಕು.

Advertisement

ಪ್ರಸಕ್ತ ಸಾಲಿನಲ್ಲಿ ಈ ಯೋಜನೆ ಅನುಷ್ಠಾನ ಮಾಡಲು ಜಿಲ್ಲೆಗೆ ಯುನಿವರ್ಸಲ್‌ ಸೋಂಪೊ ಇನ್ಶೂರೆನ್ಸ್‌ ಕಂಪೆನಿಯನ್ನು ನಿಗದಿ ಮಾಡಲಾಗಿದೆ. ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ ವಿಕೋಪಗಳಿಂದ ಶೇ. 75ಕ್ಕಿಂತ‌ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ. 25ರ ಭಾಗವನ್ನು, ಬಿತ್ತನೆಯಿಂದ ಕಟಾವು ಹಂತದ ವರೆಗಿನ ಮಧ್ಯದ ಅವಧಿಯಲ್ಲಿ ಶೇ. 50ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟದಲ್ಲಿ ಶೇ. 25ರಷ್ಟು ಪರಿಹಾರ ನೀಡಲಾಗುವುದು.

ಕಟಾವು ಬಳಿಕ ಬೆಳೆ ಒಣಗಿಸಲು ಬಿಟ್ಟ ಸಂದರ್ಭ 2 ವಾರದೊಳಗೆ ಅಕಾಲಿಕ ಮಳೆ, ಚಂಡಮಾರುತ ಸಹಿತ ಮಳೆಯಿಂದಾಗಿ ಕಟಾವು ಮಾಡಲಾದ ಬೆಳೆಯು ನಾಶವಾ ದರೆ ವಿಮಾ ಸಂಸ್ಥೆಯು ವೈಯಕ್ತಿಕವಾಗಿ ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸುತ್ತದೆ. ಪ್ರಕೃತಿ ವಿಕೋಪಗಳಾದ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆಯಿಂದಾಗುವ ನಷ್ಟವನ್ನು ವೈಯಕ್ತಿಕ ಕ್ಷೇತ್ರವಾರು ನಿರ್ಧರಿಸಿ ಪರಿಹಾರ ನೀಡಲಾಗುವುದು.

ವಿಮಾ ಕಂತು ಒಂದು ಎಕರೆಗೆ 440 ರೂ.ಗಳಂತೆ ಒಟ್ಟು ವಿಮಾ ಮೊತ್ತ 22,000 ರೂ.ಗಳಾಗಿವೆ. ಆಸಕ್ತರು ಬ್ಯಾಂಕ್‌ಗಳಲ್ಲಿ ನಿಗದಿತ ದಿನಾಂಕದೊಳಗೆ ಕಂತಿನ ಮೊತ್ತ ಪಾವತಿಸಬೇಕು. ವಿಮೆ ಮಾಡಿಸಿದ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆ ಕಚೇರಿಗಳಿಗೆ ನಷ್ಟ ಸಂಭವಿಸಿದ 72 ಗಂಟೆಯೊಳಗೆ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣ ತಿಳಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next