Advertisement

Fashion Gold Fraud Case: ಪೂಕೋಯ ತಂಙಳ್‌, ಎಂ.ಸಿ. ಖಮರುದ್ದೀನ್‌ ಸೊತ್ತು ಮುಟ್ಟುಗೋಲು

08:14 PM Aug 23, 2023 | Team Udayavani |

ಕಾಸರಗೋಡು: ಫ್ಯಾಶನ್‌ ಗೋಲ್ಡ್‌ ಠೇವಣಿ ವಂಚನೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮುಸ್ಲಿಂ ಲೀಗ್‌ ನೇತಾರರಾದ ಚಂದೇರದ ಪೂಕೋಯ ತಂಙಳ್‌, ಚೇರ್ಮನ್‌ ಆಗಿರುವ ಮಾಜಿ ಶಾಸಕ ಎಂ.ಸಿ. ಖಮರುದ್ದೀನ್‌ ಅವರ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

Advertisement

ಅನಿಯಂತ್ರಿತ ಠೇವಣಿ ಯೋಜನೆ ನಿಷೇಧ ಕಾನೂನು ಪ್ರಕಾರ ಹೊಣೆಗಾರಿಕೆಯುಳ್ಳ ರಾಜ್ಯ ಮಟ್ಟದ ಅಧಿಕಾರಿಯಾದ ರಾಜ್ಯ ಫಿನಾನ್ಸ್‌ ಸೆಕ್ರೆಟರಿ ಸಂಜಯ್‌ಎಂ. ಕೌಲ್‌ ಅವರು ಸೊತ್ತುಗಳನ್ನು ಮುಟ್ಟುಗೋಲು ಹಾಕಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆಗೆ ಮೇಲ್ನೋಟ ವಹಿಸುವ ಕಣ್ಣೂರು ಕ್ರೈಂ ಬ್ರ್ಯಾಂಚ್‌ ಎಸ್‌ಪಿ ಪಿ.ವಿ. ಸದಾನಂದನ್‌ ಅವರ ವರದಿಯ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ.

ಕಂಪೆನಿಯ ಚೇರ್ಮನ್‌ ಖಮರುದ್ದೀನ್‌, ಪೂಕೋಯ ತಂಙಳ್‌ ಅವರ ಹೆಸರಿನಲ್ಲಿ ಪಯ್ಯನ್ನೂರು ನಗರದಲ್ಲಿ ಕಾರ್ಯಾಚರಿಸುತ್ತಿರುವ ನಾಲ್ಕು ಕೊಠಡಿಗಳನ್ನೊಳಗೊಂಡ ಫ್ಯಾಶನ್‌ ಆರ್ನಮೆಂಟ್‌ ಜುವೆಲರಿ ಕಟ್ಟಡ ಹಾಗೂ ಬೆಂಗಳೂರು ಸಿಲಿಕುಂಡ ವಿಲೇಜ್‌ನಲ್ಲಿ ಪೂಕೋಯ ತಂಙಳ್‌ ಹೆಸರಿನಲ್ಲಿರುವ 1 ಎಕ್ರೆ ಭೂಮಿ ಮುಟ್ಟುಗೋಲು ಹಾಕಿಕೊಂಡ ಸೊತ್ತುಗಳಲ್ಲಿ ಒಳಗೊಂಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next