Advertisement
ಮಂಗಳವಾರ ಇಡೀ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರು ನುಗ್ಗಿ ತೊಂದರೆಗೊಳಗಾದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಅನೇಕ ಬಡಾವಣೆಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
Related Articles
Advertisement
ಇಂದು ಮುಖ್ಯಮಂತ್ರಿಗಳು ಬಡಾವಣೆಗೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಈ ವೇಳೆ ಸಂತ್ರಸ್ತರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದಲ್ಲದೇ ನಿರಾಶ್ರಿತರಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ಹಲವೆಡೆ ಕೈಗೊಂಡಿರುವ ಒಳಚರಂಡಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ, ಆದಷ್ಟು ಶೀಘ್ರವೇ ತಡಗೋಡೆ ನಿರ್ಮಾಣ ಕಾಮಗಾರಿ ಮುಗಿಯಲಿದೆ ಎಂದರು.
ಇದಕ್ಕೂ ಮುನ್ನ ಸಚಿವರು ಬಿಬಿಎಂಪಿ ಅಧಿಕಾರಿಗಳು ಮತ್ತು ಇಂಜಿನಿಯರ‌್ ಗಳೊಂದಿಗೆ ಕಮಲಾನಗರ, ನಂದಿನಿ ಬಡಾವಣೆ, ಕಂಠೀರವ ನಗರ, ವೃಷಭಾವತಿ ನಗರ ,ಜೆಸಿ ನಗರ, ಕೆರಯಂಗಳ, ಚಂದ್ರಪ್ಪ ರಸ್ತೆಗಳಲ್ಲಿ ತೊಂದರೆಗೊಳಗಾಗಿರುವ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದರು.