Advertisement
ಶುಕ್ರವಾರ ಬೆಳಗ್ಗೆ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಇಲಾಖೆಯ ಜಲಜೀವನ್ ಮಿಶನ್ ಮತ್ತು ಮನ್ರೇಗಾ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಿಸ್ತ್ರತವಾಗಿ ಮಾತನಾಡಿದ ಅವರು, 6,357 ಹಳ್ಳಿಗಳ 6,17,607 ಮನೆಗಳಿಗೆ ಕೊಳಾಯಿ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತದೆ.ಇಲ್ಲಿಯತನಕ ಒಟ್ಟು 45.44ಲಕ್ಷ ಮನೆಗಳಿಗೆ ನೀರು ಸಂಪರ್ಕ ನೀಡಲಾಗಿದೆ. ಕೇವಲ 2020-21 ರಲ್ಲಿ 3.43ಲಕ್ಷ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ದೊರೆತಿದೆ ಎಂದು ತಿಳಿಸಿದರು.
Related Articles
Advertisement
ಒಟ್ಟು 4,064 ಕೋಟಿ ಕೂಲಿ ಹಣದ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ವರ್ಷ ದಾಖಲೆಯ 13.61 ಲಕ್ಷ ಕಾಮಗಾರಿಗಳನ್ನು ತೆಗೆದುಕೊಂಡು ಈಗಾಗಲೆ 4.31 ಲಕ್ಷ ಕಾಮಗಾರಿಗಳನ್ನು ಪೂರ್ಣ ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕದಿಂದ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕರಿಗೆ ಕೆಲಸ ಒದಗಿಸುವುದರಲ್ಲಿ ನಾವು ಸಫಲರಾಗಿದ್ದೇವೆ. ಜಲಶಕ್ತಿ ಅಭಿಯಾನದಲ್ಲಿ ರಾಜ್ಯದಲ್ಲಿ 8.92 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡು 4.87 ಲಕ್ಷ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದರಲ್ಲಿ ನಾವು ದೇಶದಲ್ಲೇ ಮೊದಲನೇ ಸ್ಥಾನದಲ್ಲಿ ಇದ್ದೇವೆ ಎಂದು ತಿಳಿಸಿದರು.
ನರೇಗಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನದಿಂದ ಕಳೆದ 6 ವರ್ಷದಲ್ಲಿ 3,275 ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು ಕೈಗೆತ್ತಿಕೊಂಡು 2,335 ಕಟ್ಟಡಗಳು ಪೂರ್ಣಗೊಳಿಸಲಾಗುತ್ತಿದೆ ಎಂದು ತಿಳಿಸಿದರು.