Advertisement

ಶಿರೂರ ಗ್ರಾಮಸ್ಥರಿಂದ ನಿರಶನ

12:03 PM Jul 11, 2017 | Team Udayavani |

ಧಾರವಾಡ: ರಾಷ್ಟ್ರೀಕೃತ ಬ್ಯಾಂಕ್‌ ನಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ ಹಾಗೂ 2016ನೇ ಸಾಲಿನ ಮುಂಗಾರು-ಹಿಂಗಾರು ಬೆಳೆ ವಿಮೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ನವಲಗುಂದ ತಾಲೂಕಿನ ಶಿರೂರ ಗ್ರಾಮದ ರೈತರು ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.

Advertisement

ಶಿರೂರು ಗ್ರಾಮದ ರೈತ ಮುಖಂಡ ಮಲ್ಲಿಕಾರ್ಜುನಗೌಡ ಬಾಳನಗೌಡ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಪ್ರಧಾನಿಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ಪಕ್ಷದ ಉಪಾಧ್ಯಕ್ಷ  ರಾಹುಲ್‌ ಗಾಂಧಿ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. 

ಬರದಿಂದ ತತ್ತರಿಸಿರುವ ರೈತರ ಸಂಕಷ್ಟ ಪರಿಹರಿಸಲು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. 2016ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಪ್ರಧಾನಮಂತ್ರಿ ಫಸಲ ಭೀಮಾ ಯೋಜನೆಯನ್ನು 100ಕ್ಕೆ 100ರಷ್ಟು ಬೆಳೆ ವಿಮೆಯನ್ನು ತಕ್ಷಣ ಬಿಡುಗಡೆ ಮಾಡಬೇಕು. 

ಇದರಿಂದ ಕರ್ನಾಟಕ ರಾಜ್ಯದಲ್ಲಿನ ದ ರೈತರ ಜೀವ ಉಳಿಸಿ ಅವರ ಆತ್ಮಸ್ಥೈರ್ಯ ತುಂಬಬೇಕು ಎಂದು ಪ್ರಧಾನಿಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಎರಡೂ ಬೇಡಿಕೆ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಲು ಮಧ್ಯಸ್ಥಿಕೆ ವಹಿಸಬೇಕು ಎಂದು ರಾಹುಲ್‌ ಗಾಂಧಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಶಂಕರಪ್ಪ ಕಾಳಿ, ರವಿ ರಾಮನಗೌಡ್ರ ಸೇರಿದಂತೆ ಶಿರೂರ ಗ್ರಾಮದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next