Advertisement

ಮಹದಾಯಿಗಾಗಿ ಉಪವಾಸ ಸತ್ಯಾಗ್ರಹ ಶುರು

08:40 AM Jul 29, 2017 | Team Udayavani |

ನವಲಗುಂದ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ರೈತರಿಗೆ ಪರಿಹಾರ, ಮಹದಾಯಿ ಯೋಜನೆ ಜಾರಿ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರು ಮತ್ತು ನಿವೃತ್ತ ಶಿಕ್ಷಕ ಡಿ.ವಿ.ಕುರಹಟ್ಟಿ ಅವರು ಪಟ್ಟಣದಲ್ಲಿ ಶುಕ್ರವಾರದಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ವೇಳೆ ಲೋಕನಾಥ ಹೆಬಸೂರ ಮಾತನಾಡಿ, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಹಾಗೂ ಮಹದಾಯಿ ಯೋಜನೆ ಜಾರಿ ಕುರಿತು ಸರ್ಕಾರಗಳು ಸ್ಪಷ್ಟ ನಿಲುವು ತಾಳುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದರು.

Advertisement

ಲೋಕನಾಥ ಹೆಬಸೂರ (55) ಹಾಗೂ ಡಿ.ಬಿ.ಕುರಹಟ್ಟಿ (77) ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.
ಇವರ ಆರೋಗ್ಯದಲ್ಲಿ ಏರುಪೇರಾದರೆ ಸರ್ಕಾರವೇ ಹೊಣೆ ಎಂದು ರೈತ ಹೋರಾಟಗಾರರು ಎಚ್ಚರಿಸಿದ್ದಾರೆ.

ಬಿಂದಿಗೆ ಮೆರವಣಿಗೆ: ಇದೇ ವೇಳೆ, ಉಪವಾಸ ಸತ್ಯಾಗ್ರಹ ಬೆಂಬಲಿಸಿ ಪಟ್ಟಣದ ಮಂಜುನಾಥ ನಗರದ ನಿವಾಸಿ
ಮೈಲಾರಪ್ಪ ವೈದ್ಯ ಎಂಬುವರು ಸುಮಾರು 1 ಕಿ.ಮೀ. ವರೆಗೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎರಡು ಬಿಂದಿಗೆಯನ್ನು
ಹೊತ್ತು ಪಾದಯಾತ್ರೆ ನಡೆಸಿದರು. ನಂತರ ಬಿಂದಿಗೆ ನೀರನ್ನು ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಅಭಿಷೇಕ ಮಾಡಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದರು. ಈ ಮಧ್ಯೆ, ಪûಾತೀತ ಹೋರಾಟ ಸಮಿತಿ ರೈತ ಹೋರಾಟಗಾರರು ಶನಿವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next