Advertisement

ರಾಯಚೂರು: ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಂದ‌ ಉಪವಾಸ ನಿರಶನ

01:14 PM Jan 06, 2023 | Team Udayavani |

ರಾಯಚೂರು: ಕನಿಷ್ಠ ಸೌಲಭ್ಯಗಳನ್ನು ನೀಡದೆ ವಿದ್ಯಾರ್ಥಿಗಳ ಜೀವನದ ಜತೆ ಅಧಿಕಾರಿಗಳು ಚಲ್ಲಾಟ ಆಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಬೋಳಮಾಮದೊಡ್ಡಿ ರಸ್ತೆಯಲ್ಲಿನ ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳು ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುಮಾರು 100ಕ್ಕೂ ಅಧಿಕ ವಿದ್ಯಾರ್ಥಿಗಳು ಬೆಳಗಿನ ಜಾವದ ಉಪಾಹರವನ್ನು ಸೇವಿಸದೆ ಬಿಸಿಲಿನಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಸರಿಯಾದ ಉಪಾಹಾರ, ಊಟ ನೀಡುತ್ತಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಕೂಡ ಇಲ್ಲ. ಊಟದಲ್ಲಿ ಬಾಲಹುಳು ಬರುತ್ತಿವೆ. ವಾರ್ಡನ್ ಮನಸೋಇಚ್ಛೆ ವರ್ತಿಸುತ್ತಿದ್ದಾರೆ. ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ದೂರಿದರೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ದೂರಿದರೆ ನಾವು ಬರುವುದಿಲ್ಲ. ಏನಾದರೂ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸುತ್ತಾರೆ ಎಂದು ವಿದ್ಯಾರ್ಥಿಗಳು ದೂರುತ್ತಿದ್ದಾರೆ.

ಇದನ್ನೂ ಓದಿ:ಆಗ ನಳಪುರಿ..ಈಗ ಹಾವೇರಿ…;18ನೇ ಶತಮಾನದಲ್ಲಿ ವ್ಯಾಪಾರಿ ಕೇಂದ್ರವಾಗಿ ಪರಿವರ್ತನೆ

ವಸತಿ ನಿಲಯದಲ್ಲಿ ಸರಿಯಾದ ನೀರಿನ ವ್ಯವಸ್ಥೆ ಕೂಡ ಇಲ್ಲ. ಟಾಯ್ಲೆಟ್ ಬಳಸುವ ನೀರಿನಲ್ಲಿಯೇ ಅಡುಗೆ ಮಾಡಿ ಹಾಕುತ್ತಿದ್ದಾರೆ. ಅಡುಗೆ ಕೂಡ ರುಚಿಯಾಗಿರುವುದಿಲ್ಲ. ಸರಿಯಾದ ವಿದ್ಯುತ್ ವ್ಯವಸ್ಥೆ ಇಲ್ಲ. ವಸತಿ ನಿಲಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ವಿದ್ಯಾರ್ಥಿಗಳು ಪ್ರಶ್ನೆ ಮಾಡಬಾರದು ಎನ್ನುತ್ತಾರೆ ವಿದ್ಯಾರ್ಥಿಗಳು. ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next