Advertisement

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ

01:23 PM Oct 28, 2020 | Mithun PG |

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಇಲ್ಲಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ  ಉಪವಾಸ ಸತ್ಯಾಗ್ರಹ ಆರಂಭಗೊಂಡಿದ್ದು, ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯುತ್ತಿದೆ.

Advertisement

ಲಿಂಗಾಯತ ಧರ್ಮದ ಒಳಪಂಗಡವಾಗಿರುವ ಪಂಚಮಸಾಲಿ ಸಮುದಾಯ ಅತೀ ಹೆಚ್ಚು ಜನಸಂಖ್ಯೆ ಹೊಂದಿದೆ. ಬಹುತೇಕ ಕೃಷಿಯನ್ನೇ ಮೂಲ ಕಸುಬಾಗಿಸಿಕೊಂಡಿರುವ ಪಂಚಮಸಾಲಿ ಸಮುದಾಯದ ಜನರಿಗೆ ಸರ್ಕಾರಿ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸೌಲಭ್ಯ ನೀಡುವಂತೆ ಆಗ್ರಹಿಸಿ ಗುರುವಾರ ಬೆಳಿಗ್ಗೆ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಚನ್ನಮ್ಮಾ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದರು.

ಬಳಿಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ ಪುತ್ಥಳಿಗಳಿಗೆ ಶ್ರೀಗಳು ಮಾಲಾರ್ಪಣೆ ಮಾಡಿದರು. ನಂತರ ಹಿರೇಬಾಗೇವಾಡಿಯ ವಿಶ್ವಗುರು ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಅಲ್ಲಿಂದ ಸುವರ್ಣಸೌಧವರೆಗೂ ಬೈಕ್ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಪ್ರತಿಭಟನೆಯ ಮುಖ್ಯ ವೇದಿಕೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಇದನ್ನೂ ಓದಿ: ಬಿಹಾರ ಪ್ರಥಮ ಹಂತದ ಚುನಾವಣೆ: “ಕೈ” ಕೊಟ್ಟ ಇವಿಎಂ ಯಂತ್ರಗಳು, ಮತದಾರರ ಆಕ್ರೋಶ

ಮೀಸಲಾತಿಗಾಗಿ 20 ವರ್ಷಗಳಿಂದ ‌ಹೋರಾಟ ನಡೆಸುತ್ತ ಬಂದಿದ್ದೇವೆ. ಆದರೆ ಸರ್ಕಾರ ಮಾತ್ರ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಸಹೋದರ ಸಮಾಜಗಳು ಸಂಘಟಿತರಾಗಿ ಸಾಮಾಜಿಕ ನ್ಯಾಯ ಪಡೆದಿವೆ. ಇತರ ಸಮಾಜದವರು ಸರ್ಕಾರದ ಮೇಲೆ ಒತ್ತಡ ಹಾಕಿ ಮೀಸಲಾತಿ ಪಡೆದಿದ್ದರಿಂದ ನಾವೂ ಹೋರಾಟಕ್ಕೆ ಇಳಿದಿದ್ದೇವೆ ಎಂದು ತಿಳಿಸಿದರು.

Advertisement

ನಾವು ನಮಗಾಗಿ ಹೋರಾಟ ನಡೆಸುತ್ತಿಲ್ಲ. ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ಮೀಸಲಾತಿಯ ಹಕ್ಕೊತ್ತಾಯ ಮಂಡಿಸುತ್ತಿದ್ದೇವೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಕೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಂದಿಹಳ್ಳಿ ಹಾಲಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ರೋಹಿಣಿ ಪಾಟೀಲ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಅಕ್ಟೋಬರ್ 31ರಂದು ಬಾನಂಗಳದಲ್ಲಿ “ನೀಲಿ ಚಂದ್ರನ” ವಿಸ್ಮಯ: ಏನಿದು ಹಂಟರ್ ಮೂನ್?

Advertisement

Udayavani is now on Telegram. Click here to join our channel and stay updated with the latest news.

Next