Advertisement

ಭೀಕರ ಅಪಘಾತ ; ಫ್ಲೈ ಓವರ್‌ನಿಂದ ಬಿದ್ದು ಬೈಕ್‌ ಸವಾರ ದುರ್ಮರಣ!

04:10 PM Oct 14, 2017 | Team Udayavani |

ಬೆಂಗಳೂರು: ನಗರದಲ್ಲಿ ಒಂದೆಡೆ ಮಳೆ ಅಬ್ಬರಿಸುತ್ತಿದ್ದರೆ, ಗಾರೆಬಾವಿ ಪಾಳ್ಯದ ಎಲೆಕ್ಟ್ರಾನಿಕ್‌ ಸಿಟಿ ಪ್ಲೆ„ ಓವರ್‌ನಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಹಿಂಬದಿಯಿಂದ ಕಾರ್‌ಗೆ ಢಿಕ್ಕಿಯಾಗಿ ಬೈಕ್‌ ಸವಾರರಿಬ್ಬರು ಫ್ಲೈ ಓವರ್‌ನಿಂದ ಕೆಳಕ್ಕೆ ಬಿದ್ದಿದ್ದಾರೆ. ದುರಂತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. 

Advertisement

ಮೃತ ದುರ್ದೈವಿ ಮಹಮದ್‌ ಹುಸೈನ್‌ ಎಂದು ತಿಳಿದು ಬಂದಿದ್ದು, ಗಾಯಾಳುವನ್ನು ಸೈಂಟ್‌ ಜೋನ್ಸ್‌ ಆಸ್ಪತ್ರೆಗೆ ದಾಖಲಿಸಿ ಚಕಿತ್ಸೆ ನೀಡಲಾಗುತ್ತಿದೆ. 

ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕವಾಗಿದೆ. 

ಮಡಿವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next