Advertisement

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

10:53 AM Nov 04, 2024 | Team Udayavani |

ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 2022ರಲ್ಲಿ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು ತಂದೆ- ಮಗು ಸಾವಿಗೆ ಕಾರಣವಾದ ಆರೋಪದಲ್ಲಿ ಬೆಸ್ಕಾಂನ ಕಿರಿಯ ಎಂಜಿನಿಯರ್‌ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

Advertisement

ಪ್ರಕರಣ ಸಂಬಂಧ ಜ್ಞಾನ ಭಾರತಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್‌ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಬೆಸ್ಕಾಂ ಕಿರಿಯ ಎಂಜಿನಿಯರ್‌ ಮಹಾಂತೇಶ್‌ ಎಸ್‌ ನಾಗೂರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಘಟನೆ ಅತ್ಯಂತ ಅಪಾಯಕಾರಿಯಾಗಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿದೆ ಎಂಬ ಕಾರಣಕ್ಕೆ ಪ್ರಕರಣ ರದ್ದುಪಡಿಸಲಾಗದು. ಅರ್ಜಿದಾರರು ವಿಚಾರಣೆ ಎದುರಿಸಿ ಆರೋಪದಿಂದ ಮುಕ್ತರಾಗಿ ಹೊರಬರ ಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಟ್ರಾನ್ಸ್‌ ಫಾರ್ಮರ್‌ಗಳ ನಿರ್ವಹಣೆ ಮಾಡುವ ಕಾರ್ಯ ಗುತ್ತಿಗೆದಾರರದ್ದಾಗಿರಲಿದೆ. ಘಟನೆಗೂ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ಪ್ರಕರಣ ರದ್ದುಪಡಿ ಸಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದ್ದರು. ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next