Advertisement

ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜ್‌: ಕೋವಿಡ್‌ 19 ಪರೀಕ್ಷೆಗೆ ಐಸಿಎಂಆರ್‌ ಅನುಮೋದನೆ

07:02 AM May 21, 2020 | mahesh |

ಮಂಗಳೂರು: ನಗರದ ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಕೋವಿಡ್‌ -19 ಪರೀಕ್ಷೆ ನಡೆಸಲು ಐಸಿಎಂಆರ್‌ ಅನುಮೋದನೆ ನೀಡಿದೆ. ಆರ್‌ಟಿ-ಪಿಸಿಆರ್‌ ಪರೀಕ್ಷೆಯನ್ನು ಪ್ರಾರಂಭಿಸಲು ಬೆಂಗಳೂರಿನ ನಿಮ್ಹಾನ್ಸ್‌ ಮಾರ್ಗದರ್ಶಿ ಕೇಂದ್ರದಿಂದ ಕಿರುಪಟ್ಟಿ ಪಡೆದ ಕೇಂದ್ರಗಳಲ್ಲಿ ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಆಸ್ಪತ್ರೆಯೂ ಒಂದು. ಫಾದರ್‌ ಮುಲ್ಲರ್‌ ಚಾರಿಟೆಬಲ್‌ ಸಂಸ್ಥೆಯ ಮೈಕ್ರೋಬಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ| ಅನುಪ್‌ ಕುಮಾರ್‌ ಅವರು ಈ ಉದ್ದೇಶಕಾಗಿ ನಿಮ್ಹಾನ್ಸ್‌ನಲ್ಲಿ ತರಬೇತಿ ಪಡೆದಿದ್ದಾರೆ.

Advertisement

ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಆಸ್ಪತ್ರೆ ಪ್ರಯೋಗಾಲಯವು “ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತ ಮಂಡಳಿ’ಯಿಂದ 2012ರಿಂದ ಮಾನ್ಯತೆ ಪಡೆದಿದೆ ಮತ್ತು ಈಗಾಗಲೇ ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿದೆ.
ಪ್ರಯೋಗಾಲಯವು ರೋಗಿ ಮತ್ತು ಸಿಬಂದಿಯ ಆರೋಗ್ಯ ಸುರಕ್ಷೆ ವಿಚಾರದಲ್ಲಿ ರಾಷ್ಟ್ರೀಯ/ಅಂತಾರಾಷ್ಟ್ರೀಯ ಗುಣಮಟ್ಟದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next