Advertisement
ಏನಿದು ಘಟನೆ?: ಭಾನುವಾರ ಮುಂಜಾನೆ ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರ ಮದ್ಯಪಾನ ಮಾಡಿ ಚಲಾಯಿಸುತ್ತಿದ್ದ ಪೋರ್ಷೆ ಕಾರು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟಾ ಎನ್ನುವ ದಂಪತಿ ಸಾವನ್ನಪ್ಪಿದ್ದರು. ಈ ಸಂಬಂಧ ಪೋರ್ಷೆಯಲ್ಲಿದ್ದ ಅಪ್ರಾಪ್ತ ವಯಸ್ಕ ಮತ್ತು ಇತರ ಇಬ್ಬರನ್ನು ಪೊಲೀಸರು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.
Related Articles
Advertisement
ಪುಣೆ ಪೊಲೀಸರು ಬಾಲಕನ ತಂದೆ ವಿರುದ್ಧ ಬಾಲನ್ಯಾಯ ಕಾಯ್ದೆಯ ಸೆಕ್ಷನ್ 75 ಮತ್ತು 77 ರ ಅಡಿಯಲ್ಲಿ ಆರೋಪ ಹೊರಿಸಿದ್ದಾರೆ. (ಅಪ್ರಾಪ್ತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದು ಮತ್ತು ಅಪ್ರಾಪ್ತ ವಯಸ್ಕರಿಗೆ ಮಾದಕ ವಸ್ತುಗಳನ್ನು ಒದಗಿಸುವುದಕ್ಕೆ ಸಂಬಂಧಿಸಿದೆ).
“ಅಪಘಾತ ಪ್ರಕರಣದಲ್ಲಿ ಬಾಲಾಪರಾಧಿಗಳಿಗೆ ಮದ್ಯ ನೀಡಿದ ಬಾರ್ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆಯ ಸೆಕ್ಷನ್ 75 ಮತ್ತು 77 ರ ಅಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ಪುಣೆ ನಗರ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವೈರಲ್ ಆಗಿದ್ದ ವಿಡಿಯೋ: ಬೈಕ್ ಗೆ ಢಿಕ್ಕಿಯಾದ ಬಳಿಕ ಕಾರು ರಸ್ತೆ ಬದಿಯ ತಡೆ ಗೋಡೆಗೆ ಢಿಕ್ಕಿ ಹೊಡೆದಿದೆ. ಅಪಘಾತಕ್ಕೀಡಾದ ಕಾರಿನಿಂದ ಹೊರ ಬರಲು ಯತ್ನಿಸಿದ ಚಾಲಕನಿಗೆ ಜನರ ಗುಂಪೊಂದು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.