Advertisement

JDS; ಕಾಂಗ್ರೆಸ್ ಸೋಲಿಸಬೇಕೆಂಬ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಒಲವು: ಜಿ.ಟಿ ದೇವೇಗೌಡ

04:14 PM Sep 08, 2023 | Team Udayavani |

ಮೈಸೂರು: ಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿ ಎಫ್ ಐ ಆರ್ ದಾಖಲಾಗುತ್ತಿದೆ. ಅಧಿಕಾರಿಗಳಿಗೆ ವರ್ಗಾವಣೆ ಮಾಡುತ್ತಿದ್ದಾರೆ. ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ. ಗ್ಯಾರಂಟಿ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸ ಕುಂಠಿತವಾಗುತ್ತಿದೆ. ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕು. ಈ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ತೋರಿಸುತ್ತಿದ್ದಾರೆ ಎಂದು ಶಾಸಕ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹೊಟ್ಟೆ ಉರಿಯಿಂದ ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದ್ದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಲೋಕಸಭಾ ಚುನಾವಣೆಗೆ ಒಟ್ಟಾಗಿ ಎದುರಿಸೋಣ ಎನ್ನುವುದು ಎಲ್ಲರ ಒಮ್ಮತದ ಅಭಿಪ್ರಾಯವಾಗಿತ್ತು. ಎಚ್ ಡಿ ದೇವೇಗೌಡರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಅವತ್ತು ನಮಗೆ ಒಳ್ಳೆಯ ತೀರ್ಮಾನದ ಧೈರ್ಯ ನೀಡಿದ್ದರು ಎಂದರು.

ಇದನ್ನೂ ಓದಿ:Khattar;ನಿನ್ನ ಚಂದ್ರಯಾನ 4ರಲ್ಲಿ ಚಂದ್ರಗ್ರಹಕ್ಕೆ ಕಳುಹಿಸುವಾ;ಮಹಿಳೆಗೆ ಖಟ್ಟರ್‌ ವ್ಯಂಗ್ಯ

ಕುಮಾರಸ್ವಾಮಿಗೆ ಬಿಜೆಪಿ ಜೊತೆ ಯಾವುದೇ ವಿರೋಧ ಇಲ್ಲ. ಬಿಜೆಪಿ ಸಮರ್ಥ ಅಭ್ಯರ್ಥಿ ಎಲ್ಲಿ ಇದ್ದಾರೆ. ಜೆಡಿಎಸ್ ಸಮರ್ಥ ಅಭ್ಯರ್ಥಿ ಎಲ್ಲಿದ್ದಾರೆ ನೋಡಬೇಕು. ಈ ರೀತಿ ಅಳತೆಗೋಲು ಅನುಸರಿಸಿ ನಿರ್ಧಾರ ಮಾಡಬೇಕು. ಸ್ಥಾನ ಹಂಚಿಕೆ ಅಳತೆಗೋಲಿನಿಂದ ಮಾಡಬೇಕು. ನಾನು ಕಾರ್ಯಕರ್ತರು ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಹಿಂದೆ ಬಿಜೆಪಿ ಜೊತೆ ಹೋಗಿದಕ್ಕೆ ನನ್ನನ್ನೇ ಜನ ಸೋಲಿಸಿದ್ದರು. ಹುಣಸೂರಿನಲ್ಲಿ ನನ್ನನ್ನು ಸೋಲಿಸಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಈಗ ಯಾರು ವಿರೋಧ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ವಿರುದ್ದ ದಂಗೆ ಎದ್ದಿದ್ದಾರೆ ಎಂದು ಜಿ.ಟಿ ದೇವೇಗೌಡ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next