Advertisement

ಫಾಝಿಲ್ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು: ಆರು ಮಂದಿ ಆರೋಪಿಗಳ ಬಂಧನ

11:12 AM Aug 02, 2022 | Team Udayavani |

ಸುರತ್ಕಲ್: ಕಳೆದ ವಾರ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸುರತ್ಕಲ್ ನ ಫಾಝಿಲ್ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ.

Advertisement

ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಜುಲೈ 28ರ ರಾತ್ರಿ ಫಾಝಿಲ್ ಎಂಬಾತನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ತೀವ್ರಗೊಳಿಸಿದ್ದ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಈ ಬಗ್ಗೆ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಶಶಿಕುಮಾರ್, “ಫಾಝಿಲ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಂದು ಬೆಳಗ್ಗೆ ಅರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದೇವೆ. ಅವರು ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದೆ” ಎಂದಿದ್ದಾರೆ.

ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡದಿದ್ದ ಪೊಲೀಸರು, ಇಂದು ಬೆಳಗ್ಗೆ ಪಣಂಬೂರು ಎಸಿಪಿ ಕಚೇರಿಯಲ್ಲಿ ಕಮಿಷನರ್ ಮೇಲ್ವಿಚಾರಣೆಯಲ್ಲಿ ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ:ಭಟ್ಕಳ ತಾಲೂಕಿನಲ್ಲಿ ಮೇಘ ಸ್ಫೋಟ : ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಸಿಲುಕಿರುವ ಶಂಕೆ

Advertisement

ಘಟನೆಗೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಲಾದ ಕಾರಿನ ಮಾಲಕ ಅಜಿತ್ ಕ್ರಾಸ್ತಾನನ್ನು ಶನಿವಾರ ಬಂಧಿಸಲಾಗಿತ್ತು. ಈತನನ್ನು ಪೊಲೀಸರು ಐದು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next