24ರಂದು 33ನೇ ವರ್ಷದ ಹೊನಲು ಬೆಳಕಿನ ಕಂಬಳ ನಡೆಸಲು ನಿರ್ಧರಿಸಲಾಗಿದ್ದು, ಸಮಿತಿಗಳನ್ನು ರಚಿಸಲಾಗಿದೆ.
Advertisement
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ವಾರದೊಳಗೆ ಕರೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ, ಕುದಿ ಓಡಿಸಲು ಕಂಬಳದ ಕೋಣಗಳಿಗೆ ಅನುವು ಮಾಡಿ ಕೊಡಬೇಕು. ಕಂಬಳ ಆರಂಭಕ್ಕೆ ಮೊದಲು ಉಪ್ಪಿನಂಗಡಿಯ ಶ್ರೀ ಸಹಸ್ರ ಲಿಂಗೇಶ್ವರ – ಮಹಾಕಾಳಿ ದೇವಾಲಯದ ವಠಾರದಿಂದ ಕಂಬಳದ ಕರೆಗೆ ಕಲ್ಕಡ್ಕದ ಗೊಂಬೆ ಕುಣಿತ, ಕೀಲು ಕುದುರೆ ಹಾಗೂ ಬ್ಯಾಂಡ್ ವಾದ್ಯಗಳೊಂದಿಗೆ ಕಂಬಳದ ಕೋಣಗಳನ್ನು ಮೆರವಣಿಗೆಯಲ್ಲಿ ಕರೆ ತರಬೇಕು. ಈ ಬಾರಿ 150 ಜೊತೆ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಕಂಬಳ ಕೋಣಗಳಿಗೂ ವಿಶ್ರಾಂತಿಗೆ ವ್ಯವಸ್ಥೆ ಮಾಡಬೇಕು. ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಎಲ್ಲರೂ ಸುಲಲಿತವಾಗಿ ಕಂಬಳ ವೀಕ್ಷಣೆಗೆ ಆಸನ ವ್ಯವಸ್ಥೆ ಮಾಡಬೇಕು ಎಂದು ಅಶೋಕ್ ಕುಮಾರ್ ರೈ ಹೇಳಿದರು.