Advertisement
ಹೀಗಾಗಿ ಉತ್ತರ ಪ್ರದೇಶಕ್ಕೆ ಆಗಮಿಸುವ ಎಲ್ಲ ರೈಲು ಮತ್ತು ಬಸ್‌ಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಲಾಡ್ಜ್ ಹಾಗೂ ಗೆಸ್ಟ್ ಹೌಸ್‌ಗಳ ಮೇಲೆ ನಿಗಾ ವಹಿಸಲಾಗಿದೆ. 2005 ಉಗ್ರ ದಾಳಿ ಸಂಚಿನ ಪ್ರಕರಣದ ತೀರ್ಪು ಜೂನ್ 18 ರಂದು ಪ್ರಕಟವಾಗಲಿದೆ. 2005 ಜೂನ್ 5 ರಂದು ಅಯೋಧ್ಯೆಯಲ್ಲಿ ಉಗ್ರ ದಾಳಿ ಸಂಚನ್ನು ವಿಫಲಗೊಳಿಸಲಾಗಿತ್ತು. ಐವರು ಉಗ್ರರನ್ನು ಹತ್ಯೆಗೈದು, ನಾಲ್ವರು ಕಾಶ್ಮೀರಿ ಯುವಕರನ್ನು ಬಂಧಿಸಲಾಗಿತ್ತು. ಜೂನ್ 16 ರಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಠಾಕ್ರೆ ಜೊತೆಗೆ 18 ಶಿವಸೇನೆ ಸಂಸದರೂ ಇರಲಿದ್ದಾರೆ.
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರು ಅವಿತಿರುವ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಅವಂತಿಪೋರಾದಲ್ಲಿ ಶೋಧ ಕಾರ್ಯ ಆರಂಭಿಸಿತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೆಲ ಕಾಲ ಎರಡೂ ಕಡೆ ಗುಂಡಿನ ಚಕಮಕಿ ನಡೆದಿದೆ. ಕೊನೆಗೆ ಇಬ್ಬರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.