Advertisement
ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉತ್ತರ ಭಾರತದಲ್ಲಿ ರಾವಣನನ್ನು ಕೂಡ ಪೂಜಿಸುವ ಪದ್ದತಿ ಇದೆ. ನಮ್ಮ ಸಂಸ್ಕೃತಿಯನ್ನು ಸರಿಯಾಗಿ ತಿಳಿದುಕೊಂಡಿದ್ದರೆ ಈ ಮಟ್ಟಕ್ಕೆ ಬಿಜೆಪಿಯವರು ಇಳಿಯುತ್ತಿರಲಿಲ್ಲ. ಭಾರತ್ ಜೋಡೋ ಯಾತ್ರೆಯ ನಂತರ ಇಂಡಿಯಾ ಮೈತ್ರಿಕೂಟ ಪ್ರಾರಂಭವಾಯಿತು. ಇಂಡಿಯಾ ಮೈತ್ರಿಕೂಟ ಬಲಿಷ್ಠವಾಗಿ ರೂಪುಗೊಳ್ಳುತ್ತಿದೆ, ಇಂಡಿಯಾ ಒಂದಾಗುತ್ತಿದೆ. ಇಂಡಿಯಾ ರಕ್ಷಣೆಯಾಗಲಿದೆ. ಹೀಗಾಗಿ ಬಿಜೆಪಿಯವರು ರಾಹುಲ್ ಗಾಂಧಿ ಪಾದಯಾತ್ರೆ ಹಾಗೂ ಮೈತ್ರಿಗೆ ಹೆದರಿಕೊಂಡಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರಿಗೆ ರಾವಣನ ರೀತಿ 10 ತಲೆ ಹಾಕಿದ್ದಾರೆ. ರಾಮ- ರಾವಣರ ಯುದ್ಧ ಆಗುವ ಹೊತ್ತಿನಲ್ಲಿ ರಾವಣ ರಾಮನಿಗೆ ಯುದ್ಧದ ಸಂಕಲ್ಪ ಮಾಡಿಸುತ್ತಾನೆ. ಬಿಜೆಪಿಯವರು ಪುರಾಣ ತಿಳಿದುಕೊಳ್ಳಬೇಕು. ರಾಹುಲ್ ಗಾಂಧಿ ಅವರ ಬಗ್ಗೆ ಎಷ್ಟು ಭಯಭೀತರಾಗಿದ್ದಾರೆ ಎನ್ನುವುದು ‘ರಾವಣ’ ಪೋಸ್ಟರ್ ನೋಡಿದರೆ ತಿಳಿಯುತ್ತದೆ ಎಂದರು.
Related Articles
Advertisement
ಇದನ್ನೂ ಓದಿ:Bigg Boss: ಬಿಗ್ ಬಾಸ್ ಮನೆಯೊಳಗೆ ಎಂಟ್ರಿ ಕೊಡಲಿದ್ದಾರೆ ವಯಸ್ಕ ನಟಿ
ನೂತನ ಮದ್ಯದಂಗಡಿಗಳಿಗೆ ಅನುಮತಿ ನೀಡುವುದಿಲ್ಲ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದಾಗ, “ಮುಖ್ಯಮಂತ್ರಿಗಳು ಹೇಳಿದ್ದಾರೆ. ಮದ್ಯದಂಗಡಿ ತೆರೆಯಲು ಅದಕ್ಕೆ ಆದ ಕಾನೂನು ಎಂಎಸ್ಐಎಲ್ ಸೇರಿದಂತೆ ಅನೇಕ ನಿಯಮಗಳಿವೆ. ಹೀಗಾಗಿ ಪ್ರತಿ ಹಳ್ಳಿ ಹಳ್ಳಿಯಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಇವುಗಳನ್ನು ಒಂದು ವ್ಯವಸ್ಥಿತ ರೂಪದಲ್ಲಿ ತರಬೇಕಿದೆ” ಎಂದು ತಿಳಿಸಿದರು.
ಲಿಂಗಾಯತರ ಶೇ.20 ರಷ್ಟು ಹಾಗೂ ಇತರೆಯವರ ಶೇ.80 ರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬಂದಿವೆ ಎಂಬ ಪ್ರಕಾಶ್ ರಾಥೋಡ್ ಹೇಳಿಕೆಗೆ “ಅಂತಹ ಯಾವುದೇ ಲೆಕ್ಕ ಇಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಗೌಪ್ಯ ಮತದಾನ ವ್ಯವಸ್ಥೆ ಅಳವಡಿಸಿಕೊಂಡಿದ್ದೇವೆ. ಯಾರ್ಯಾರು ಮತ ಹಾಕುತ್ತಾರೆ ಎಂದು ಹೇಗೆ ತಿಳಿಯುತ್ತದೆ? ಇಡೀ ರಾಜ್ಯದ ಜನ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ, 136 ಸೀಟು ಕೊಟ್ಟಿದ್ದಾರೆ” ಎಂದು ತಿಳಿಸಿದರು.