Advertisement
ಮಂಗಳೂರು ನಗರದ ರೊಜಾ ರಿಯೊ ಕೆಥೆಡ್ರಲ್‌ನಲ್ಲಿ ಬಿಷಪ್ ರೆ|ಫಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಹಾಗೂ ಉಡುಪಿಯ ಶೋಕಮಾತಾ ಇಗರ್ಜಿಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ|ಫಾ| ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರು ಗರಿಗಳ ರವಿವಾರದ ಬಲಿ ಪೂಜೆಯ ನೇತೃತ್ವ ವಹಿಸಿದ್ದರು.
Related Articles
Advertisement
ಗರಿಗಳ ರವಿವಾರದ ಹಿನ್ನೆಲೆ 2 ಸಾವಿರ ವರ್ಷಗಳ ಹಿಂದೆ ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೇಂಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು “ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿಕೊಂಡಿದ್ದರು ಎಂಬ ಉಲ್ಲೇಖ ಬೈಬಲ್‌ನಲ್ಲಿದೆ. ಪ್ರಸ್ತುತ ಇಲ್ಲಿ ಒಲಿವ್ ಮರದ ಗರಿಗಳ ಬದಲು ತೆಂಗಿನ ಗರಿಗಳನ್ನು ಸಾಂಕೇತಿಕವಾಗಿ ಹಿಡಿದು ಹಿಂದಿನ ಘಟನೆಯನ್ನು ಸ್ಮರಿಸಲಾಗುತ್ತದೆ. ಗರಿಗಳ ರವಿವಾರದೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ. ಗುರುವಾರ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನ, ಶುಭ ಶುಕ್ರವಾರ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನ, ಶನಿವಾರ ರಾತ್ರಿ ಈಸ್ಟರ್ ಹಬ್ಬದ ಜಾಗರಣೆ ಹಾಗೂ ರವಿವಾರ ಯೇಸು ಕ್ರಿಸ್ತರ ಪುನರುತ್ಥಾನದ ದಿನದ ಹಬ್ಬವನ್ನು ಆಚರಿಸಲಾಗುತ್ತದೆ.