Advertisement
ಇಂದು ಬೆಂಗಳೂರಿನ ಶ್ವಾಸ ಕೇಂದ್ರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಪಂಚಮಸಾಲಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಸಮುದಾಯವನ್ನು ಸಂಘಟಿಸಬೇಕು ಹಾಗೂ ನಿರ್ಲಕ್ಷಕ್ಕೆ ಒಳಗಾಗಿದ್ದ ಸಮುದಾಯಕ್ಕೆ ಸಿಗಬೇಕಾದ ನ್ಯಾಯವನ್ನು ಒದಗಿಸಬೇಕು ಎನ್ನುವ ಏಕೈಕ ಉದ್ದೇಶದಿಂದ ಹರಿಹರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠವನ್ನು 2008 ಫೆಬ್ರವರಿ 18 ರಂದು ಸ್ಥಾಪಿಸಲಾಯಿತು. ಅಂದು ನಾಡಿನ ಪ್ರಮುಖ ಮಠಾಧೀಶರುಗಳು ಒಗ್ಗೂಡಿ ಈ ಸಮುದಾಯಕ್ಕೆ ಪೀಠದ ಅವಶ್ಯಕತೆಯನ್ನು ಸಾರಿ ಹೇಳಿದ್ದರು.
Related Articles
Advertisement
ಪಂಚಮಸಾಲಿ ಸಮುದಾಯ ರಾಜ್ಯದ ವಿವಿಧ ಭಾಗಗಳಲ್ಲಿ ಹಂಚಿಕೊಂಡಿದೆ. ಈ ಸಮುದಾಯದ ಸಂಘಟನೆಗೆ ಕೇವಲ ಒಂದು ಪೀಠದ ವ್ಯಾಪ್ತಿ ಸಾಕಾಗುವುದಿಲ್ಲ. ಈ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದ ಸಮುದಾಯದ ಸಂಘಟನೆಗೆ ಈ ಜಮಖಂಡಿ ಪೀಠ ಸ್ಥಾಪನೆಯಾಗಿದೆ. ನಮ್ಮ ಸಂಘಟನೆಯ ನೊಗಕ್ಕೆ ಮತ್ತೊಂದು ಜೋಡೆತ್ತು ಸಿಕ್ಕಂತಾಗಿದೆ ಎಂದು ಹೇಳಿದರು.
ನಾಡಿನ ಶ್ರೇಷ್ಠ ಸಂತ-ಮಹಾಂತರ ದಿವ್ಯ ಸಾನಿಧ್ಯ, ಸರ್ವ ಸಮಾಜದ ಭಾಂಧವರ ಉಪಸ್ಥಿತಿ ಹಾಗೂ ನಾಡಿನ ಪ್ರಮುಖ ನಾಯಕರುಗಳು ಭಾಗಿ
ಫೆಬ್ರವರಿ 13 ರಂದು ಜಮಖಂಡಿಯ ಅಲಗೂರಿನಲ್ಲಿ ನಡೆಯಲಿರುವ ನೂತನ ಜಗದ್ಗುರು ಪೀಠಾರೋಹಣ ಧರ್ಮಸಭೆ ಕಾರ್ಯಕ್ರಮ ಹಾಗೂ ವಿರಾಟ್ ರೈತ ಸಮಾವೇಶದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಲ್ಲದೆ, ನಾಡಿನ ಶ್ರೇಷ್ಠ ಸಂತ – ಮಹಾಂತರ ದಿವ್ಯ ಸಾನಿಧ್ಯವಿರಲಿದೆ. ಅಲ್ಲದೆ, ಪ್ರಮುಖ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ.
ಇನ್ನೊಂದು ಪೀಠದ ಅಗತ್ಯತೆಇನ್ನೊಂದು ಪೀಠದ ಅಗತ್ಯತೆ ಬಹಳಷ್ಟಿತ್ತು. ನಮ್ಮ ಮೂಲ ಪೀಠದ ಜೊತೆಯಲ್ಲಿ ಹೆಜ್ಜೆ ಹಾಕುವಂತಹ ನೂತನ ಶಕ್ತಿ ಬೇಕಾಗಿತ್ತು ಈ ನಿಟ್ಟಿನಲ್ಲಿ ಇನ್ನೊಂದು ಪೀಠ ಸ್ಥಾಪನೆಯಾಗಿದೆ. ಆದರೆ, ಈಗಾಗಲೇ ಘೋಷಿಸಿರುವಂತೆ ಹರಿಹರ ಪೀಠ ಪಂಚಮಸಾಲಿಗಳ ಪಾಲಿಗೆ ಧರ್ಮಕ್ಷೇತ್ರವಾಗಿರಲಿದೆ. ನಾಡಿನ ಉದ್ದಗಲಕ್ಕೂ ಇನ್ನು ಕೆಲವು ಪೀಠಗಳು ಉದಯವಾಗಲಿ. ನಮ್ಮ ಪೀಠದ ಮೂಲತತ್ವಗಳನ್ನು ಪ್ರಚುರಪಡಿಸುವ ಎಲ್ಲಾ ಪೀಠಗಳಿಗೂ ನಮ್ಮ ಬೆಂಬಲ ಇರಲಿದೆ ಎಂದು ಹೇಳಿದರು.