Advertisement

Feb.26, 27: ಬೆಂಗಳೂರಿನಲ್ಲಿ ಉದ್ಯೋಗ ಮೇಳ

01:13 AM Feb 22, 2024 | Team Udayavani |

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26 ಮತ್ತು 27ರಂದು ಬೃಹತ್‌ ಉದ್ಯೋಗ ಮೇಳ-2024 ನಡೆಯಲಿದ್ದು, 500ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಕಂಪೆನಿಗಳು ಪಾಲ್ಗೊಳ್ಳಲಿವೆ. ರಾಜ್ಯದ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳಬಹುದು.

Advertisement

ಕೌಶಲಾಭಿವೃದ್ದಿ ಹಾಗೂ ಜೀವ ನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳದಲ್ಲಿ ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕಂಪೆನಿಗಳು ಮುಂದೆ ಬರಲಿವೆ ಎಂದು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿ ವೃದ್ಧಿ ಸಚಿವ ಡಾ| ಶರಣ ಪ್ರಕಾಶ್‌ ಪಾಟೀಲ್‌ ಹಾಗೂ ಐಟಿ- ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಶರಣ್‌ ಪ್ರಕಾಶ್‌ ಪಾಟೀಲ್‌ ಮಾತನಾಡಿ, ಪದವಿ, ಎಂಜಿನಿ ಯರಿಂಗ್‌, ಡಿಪ್ಲೊಮಾ, ಐಟಿಐ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಮುಗಿಸಿರುವವರಿಗೆ ಉದ್ಯೋಗ ಒದಗಿಸಿಕೊಡುವ ಮೇಳ ಇದಾಗಿದೆ. 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಂಡಿದ್ದು, ಅದು ಇನ್ನೂ ಹೆಚ್ಚುವ ವಿಶ್ವಾಸವಿದೆ. ಮೇಳದಲ್ಲಿ 600ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾ ಗಿದ್ದು, ಕಂಪೆನಿಗಳ ನುರಿತ ತಜ್ಞರು, ಪರಿಣಿತರು ಇರುತ್ತಾರೆ ಎಂದರು.

ಸಚಿವ ಪ್ರಿಯಾಂಕ್‌ ಖರ್ಗೆ ಮಾತ ನಾಡಿ, ಇಲ್ಲಿ ನೋಂದಣಿ ಮಾಡಿಕೊಂಡ ನಿರುದ್ಯೋಗಿಗಳಿಗೆ ಉದ್ಯೋಗದ ಜತೆಗೆ ಅವರ ಕೌಶಲದ ಕೊರತೆಗಳನ್ನು ಸರಿಪಡಿಸಿ ಉದ್ಯೋಗ ಕೊಡಿಸುವ ಪ್ರಯತ್ನ ಮಾಡುತ್ತೇವೆ ಎಂದರು. ಭವಿಷ್ಯದಲ್ಲಿ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕೇಂದ್ರಗಳಲ್ಲಿಯೂ ಉದ್ಯೋಗ ಮೇಳ ನಡೆಸಲಾಗುವುದು. ಮಾಹಿತಿಗೆ https: //skillconnect.kaushalkar.com ಅಥವಾ 18005999918 ಸಂಪರ್ಕಿಸಬಹುದು .

ಉದ್ಯೋಗ ಸಿಗದವರಿಗೆ ತರಬೇತಿ
ಮೇಳದಲ್ಲಿ ಯಾರಿಗೆ ಉದ್ಯೋಗ ಸಿಗುವುದಿಲ್ಲವೋ ಅಂಥವರಿಗೆ ತರಬೇತಿ ನೀಡುವ ಉದ್ದೇಶ ಇಟ್ಟುಕೊಂಡಿದ್ದೇವೆ. ತರಬೇತಿ ಪಡೆದವರು ಮುಂದಿನ ದಿನಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು. ಈ ತರಬೇತಿ ನೀಡಲು ನುರಿತ ತಜ್ಞರು ಮುಂದೆ ಬಂದಿದ್ದಾರೆ ಎಂದು ಎಂದು ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

Advertisement

ಮೇಳಕ್ಕೆ ಬರಲು ಉಚಿತ ಬಸ್‌, ರೈಲು, ಊಟ
ಮೇಳಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಬರುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲು ಮೆಜೆಸ್ಟಿಕ್‌, ಸ್ಯಾಟಲೈಟ್‌ ಬಸ್‌ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಿಂದ ಉಚಿತ ಬಸ್‌ ವ್ಯವಸ್ಥೆ ಇರಲಿದೆ. ಸಮ್ಮೇಳನಕ್ಕೆ ಬರುವವರಿಗೆ ಉಚಿತ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next