ಶಿವಮೊಗ್ಗ: ಫೆ.27 ಐತಿಹಾಸಿಕ ದಿನ ಆಗುವುದರಲ್ಲಿ ಸಂಶಯ ಇಲ್ಲ ಎಂದು ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆಯ ಮುನ್ನಾ ದಿನ ಭಾನುವಾರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಂಭ್ರಮ ಹೊರ ಹಾಕಿದ್ದಾರೆ.
ನಗರದಲ್ಲಿ ಭಾನುವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ನಾಳಿನ ಸೋಗಾನೆ ವಿಮಾನ ನಿಲ್ದಾಣ ಉದ್ಘಾಟನೆಗೆ ಸಾಕ್ಷಿ ಆಗಲಿದ್ದಾರೆ. ಪಕ್ಷದ ಕಾರ್ಯಕರ್ತ ಬೆಂಬಲದಿಂದ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇದೆ ಎಂದರು.
ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ರಾತ್ರಿ ವೇಳೆ ಕಾರ್ಯ ನಿರ್ವಹಿಸುವ ಸಾಮಾರ್ಥ್ಯ ಹೊಂದಿನ ವಿಮಾನ ನಿಲ್ದಾಣಕ್ಕೆ ಶಿವಮೊಗ್ಗ ಸಾಕ್ಷಿ ಆಗಲಿದೆ. ರಾತ್ರಿ ವೇಳೆ ವಿಮಾನ ಲ್ಯಾಂಡಿಗ್ ವ್ಯವಸ್ಥೆ ಇಲ್ಲಿ ಯಾವುದೇ ಅಡೆ ತಡೆ ಇಲ್ಲದೆ ಕಲ್ಪಿಸಲಾಗಿದೆ ಎಂದ ಅವರು, ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ನನ್ನ ಜೀವನದಲ್ಲಿಯೇ ಮರೆಯಲಾಗದ ಕ್ಷಣ. ಎಂದೇ ಕೇಳಿದರು ಈ ದಿನವನ್ನು ನೆನೆಯುತ್ತೇನೆ ಎಂದರು.
ರಾಜ್ಯದಲ್ಲಿ ಬೂತ್ ಮಟ್ಟದಿಂದ ಪಕ್ಷ ಸಂಘಟಿಸುವ ಜವಬ್ದಾರಿ ನನ್ನ ಮೇಲಿದೆ. ವಿಧಾನ ಸಭಾ ಚುನಾವಣೆ ನಿಮಿತ್ತ ಕಾರ್ಯಕರ್ತರನ್ನು ಒಳಗೊಂಡು ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಪಕ್ಷಕ್ಕೆ ಬಲ ತುಂಬುತ್ತೇನೆ. ಅದೇ ರೀತಿ ಮುಂದಿನ ಲೋಕ ಸಭಾ ಚುನಾವಣೆ ಕೂಡ ಸವಾಲಾಗಲಿದೆ. ಮುಂದಿನ ಬಾರಿಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಅಧಿಕಾರಕ್ಕೆ ಬರಬೇಕು ಎನ್ನುವ ನಿಟ್ಟಿನಿಂದ ಅಲ್ಲಿಯೂ ನನ್ನ ಶ್ರಮ ಇರಲಿದೆ ಎಂದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರ ಸ್ವಾಮಿ ಅವರ ಕುರಿತು ಮಾತನಾಡಲು ಇಚ್ಚಿಸುವುದಿಲ್ಲ. ಅವರ ಮನಸ್ಸಿನಲ್ಲಿ ಬಿಜೆಪಿಗೆ ಬಹುಮತ ಪದೆಯಬಾರದು ಎನ್ನುವ ಕಲ್ಪನೆ ಇದೆ. ಆದರೆ ಚುನಾವಣೆಯಲ್ಲಿ ಬಿಜೆಪಿಯು ಸ್ಪಷ್ಟ ಬಹುಮತದೊಂದಿಗೆ ಜಯ ಗಳಿಸುತ್ತದೆ ಎನ್ನುವುದು ಚುನಾವಣೆ ನಂತರ ಅವರಿಗೆ ಅರಿವಾಗುತ್ತದೆ ಎಂದರು.
ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಕುರಿತು ಉತ್ತರಿಸಿದ ಅವರು, ಅದು ಕೇಂದ್ರ ಸರಕಾರದ ನಿರ್ಧಾರ. ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.