ಬೆಳ್ತಂಗಡಿ: ಧರ್ಮಸ್ಥಳದ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 41ನೇ ವರ್ಧಂತ್ಯುತ್ಸವದ ಪ್ರಯುಕ್ತ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಫೆ. 3ರಂದು ಬೆಳಗ್ಗೆ 8.30ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.
Advertisement
ಕಾರ್ಕಳ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು. ಪೂರ್ವಭಾವಿಯಾಗಿ ಫೆ. 2ರಂದು ಬೆಳಗ್ಗೆ 9ರಿಂದ ರತ್ನಗಿರಿಯಲ್ಲಿ ತೋರಣ ಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ ಮತ್ತು ಸಂಜೆ 4ರಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.