Advertisement

ವಿಶ್ವ ಬಂಟರ ಸಂಘಗಳ ಒಕ್ಕೂಟ: ಸ್ನೇಹ ಸಮ್ಮಿಲನ ಪೂರ್ವಭಾವಿ ಸಭೆ

01:18 PM Mar 12, 2019 | |

ಮುಂಬಯಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಮತ್ತು  ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮಾ. 17ರಂದು ಸಂಜೆ  4ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ನುಡಿದರು.

Advertisement

ಮಾ. 8ರಂದು ಸಂಜೆ ಬಂಟರ ಭವನದ ಎನೆಕ್ಸ್‌ ಸಂಕೀರ್ಣದಲ್ಲಿರುವ ಮಾತೃಭೂಮಿ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾನ್ಫರೆನ್ಸ್‌ ಹಾಲ್‌ನಲ್ಲಿ ಜರಗಿದ ವಿಶ್ವ ಬಂಟರ ಸಂಘಗಳ ಒಕ್ಕೂಟದ ನೂತನ ಸಮಿತಿಯ ಸ್ನೇಹ ಸಮ್ಮಿಲನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದಿನ ಸ್ನೇಹ ಸಮ್ಮಿಲನವನ್ನು ಬಂಟರ ಸಂಘ ಅಧ್ಯಕ್ಷ ಪದ್ಮನಾಭ ಪಯ್ಯಡೆ ಇವರು ಉದ್ಘಾಟಿಸಲಿದ್ದಾರೆ. ವಿಶ್ವ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ತೋನ್ಸೆ ಆನಂದ ಶೆಟ್ಟಿ, ಡಾ| ಆರ್‌. ಎನ್‌. ಶೆಟ್ಟಿ, ಡಾ| ವಿನಯ್‌ ಹೆಗ್ಡೆ, ಶಶಿಕಿರಣ್‌ ಶೆಟ್ಟಿ, ಕೆ. ಡಿ. ಶೆಟ್ಟಿ ಚೆಲ್ಲಡ್ಕ, ಪ್ರಕಾಶ್‌ ಶೆಟ್ಟಿ ಬಂಜಾರ, ಕೆ. ಎಂ. ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಬಂಟ ಸಂಘ ಸಂಸ್ಥೆಗಳ ಅಧ್ಯಕ್ಷರು, ಒಕ್ಕೂಟದ ಮಹಾಪೋಷಕರು, ಪೋಷಕರು ಹಾಗೂ ದಾನಿಗಳು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ವಿಶ್ವ ಬಂಟರ ಸಂಘಗಳ ಒಕ್ಕೂಟಕ್ಕೆ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಗೌರವ ಕಾರ್ಯದರ್ಶಿ ವಿಜಯ ಪ್ರಸಾದ್‌ ಆಳ್ವ, ಗೌರವ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಇವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಗುವುದು. ಜೊತೆಗೆ ಒಕ್ಕೂಟದ ನಿರ್ದೇಶಕರುಗಳಾದ ತೋನ್ಸೆ ಆನಂದ ಶೆಟ್ಟಿ, ಕೆ. ಡಿ. ಶೆಟ್ಟಿ ಚೆಲ್ಲಡ್ಕ, ಪ್ರಕಾಶ್‌ ಶೆಟ್ಟಿ ಬಂಜಾರ, ವಿರಾರ್‌ ಶಂಕರ್‌ ಶೆಟ್ಟಿ ಇವರನ್ನು ಅಭಿನಂದಿಸಲಾಗುವುದು. ಇತ್ತೀಚೆಗೆ ವಿದೇಶದಿಂದ ಗೌರವ ಡಾಕ್ಟರೇಟ್‌ ಪದವಿ ಪಡೆದ ಒಕ್ಕೂಟದ ಸದಸ್ಯರಾದ ಮೆರಿಟ್‌ ಹಾಸ್ಪಿಟಾಲಿಟಿ ಸರ್ವಿಸಸ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಸಿಎಂಡಿ ಅಶೋಕ್‌ ಶೆಟ್ಟಿ ಬೆಳ್ಳಾಡಿ ಹಾಗೂ ಖ್ಯಾತ ಸಂಘಟಕ, ಕಲಾವಿದ, ಬಂಟರ ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಇವರನ್ನು ಗೌರವಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿಟuಲ್‌ ನಾಯ್ಕ ಕಲ್ಲಡ್ಕ ಮತ್ತು ತಂಡದವರಿಂದ ಹಾಗೂ ವಿವಿಧ ಬಂಟ ಸಂಘ-ಸಂಸ್ಥೆಗಳ ಸದಸ್ಯರಿಂದ ವೈವಿಧ್ಯಮಯ ಕಾರ್ಯಕ್ರಮಗಳು ಜರಗಲಿದೆ. ಆಮಂತ್ರಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಎಲ್ಲರೂ ಸಹಕಾರ ನೀಡುವಂತೆ ವಿನಂತಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿ ಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸ್ವಾಗತ ಸಮಿತಿಯ ಮೇಲ್ವಿಚಾರಕರನ್ನಾಗಿ ಪ್ರಾದೇಶಿಕ ಸಮಿತಿಗಳ ಸಮನ್ವಯಕರಾದ ಇಂದ್ರಾಳಿ ದಿವಾಕರ ಶೆಟ್ಟಿ, ಡಾ| ಪ್ರಭಾಕರ ಶೆಟ್ಟಿ ಬಿ.,ಸಂಘದ 9 ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರು, ಅತಿಥಿ ಸತ್ಕಾರದ ನೇತೃತ್ವವನ್ನು ಗೌತಮ್‌ ಶೆಟ್ಟಿ, ಶಿವಪ್ರಸಾದ್‌ ಶೆಟ್ಟಿ, ದಿವಾಕರ ಶೆಟ್ಟಿ ಕುರ್ಲಾ ಇವರಿಗೆ ವಹಿಸಲಾಯಿತು. ಕ್ಯಾಟರಿಂಗ್‌ ಮೇಲ್ವಿ ಚಾರಕರನ್ನಾಗಿ ಬಂಟರ ಸಂಘದ
ಕ್ಯಾಟರಿಂಗ್‌ ಸಮಿತಿಯ ಕಾರ್ಯಾ ಧ್ಯಕ್ಷ ಕೃಷ್ಣ ವಿ. ಶೆಟ್ಟಿ ಇವರನ್ನು ಆಯ್ಕೆ ಮಾಡಲಾಯಿತು. ವೇದಿಕೆ ಮತ್ತು ಕಾರ್ಯಕ್ರಮ ನಿರೂಪಣೆ ಯನ್ನು ಬಂಟರವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ ನಿರ್ವಹಿಸಲಿದ್ದಾರೆ. ಸಾಂಸ್ಕೃತಿಕ ಸಮಿತಿಯ ನೇತೃತ್ವವನ್ನು ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಇವರಿಗೆ ನೀಡಲಾಯಿತು.

ವೇದಿಕೆಯ ವ್ಯವಸ್ಥೆಯನ್ನು ದಿವಾಕರ ಶೆಟ್ಟಿ ಹಾಗೂ ವೇಣುಗೋಪಾಲ್‌ ಶೆಟ್ಟಿ ಅವರಿಗೆ ನೀಡ ಲಾಯಿತು. ಪೂಜಾ ಸಮಿತಿಯ ನೇತೃತ್ವವನ್ನು ಸಂಘದ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಇವರಿಗೆ ವಹಿಸಿಕೊಡಲಾಯಿತು. ಸಮವಸ್ತ್ರ ಬಿಳಿಕುರ್ತಾ-ಪೈಜಾಮ ಹಾಗೂ ಕೋಟ್‌ ಧರಿಸುವಂತೆ ಸದಸ್ಯರಲ್ಲಿ ವಿನಂತಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಕೃಷ್ಣ ವಿ. ಶೆಟ್ಟಿ, ಸಿಎ ಸಂಜೀವ ಶೆಟ್ಟಿ, ಶಾಂತಾರಾಮ ಬಿ. ಶೆಟ್ಟಿ, ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಅಶೋಕ್‌ ಪಕ್ಕಳ, ರವೀಂದ್ರನಾಥ ಭಂಡಾರಿ, ಡಾ| ಪ್ರಭಾಕರ ಶೆಟ್ಟಿ, ಇಂದ್ರಾಳಿ ದಿವಾಕರ ಶೆಟ್ಟಿ, ರಾಜೀವ ಭಂಡಾರಿ, ದಿವಾಕರ ಶೆಟ್ಟಿ ಕುರ್ಲಾ, ನಲ್ಯಗುತ್ತು ಪ್ರಕಾಶ್‌ ಶೆಟ್ಟಿ, ಗೌತಮ್‌ ಶೆಟ್ಟಿ, ಶಿವಪ್ರಸಾದ್‌ ಶೆಟ್ಟಿ, ಕರ್ನೂರು ಮೋಹನ್‌ ರೈ, ಜಗದೀಶ್‌ ಶೆಟ್ಟಿ ನಂದಿಕೂರು, ಜಯಂತ್‌ ಪಕ್ಕಳ, ಗಿರೀಶ್‌ ಶೆಟ್ಟಿ ತೆಳ್ಳಾರ್‌, ಸತೀಶ್‌ ಶೆಟ್ಟಿ, ರವೀಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

Advertisement
Advertisement

Udayavani is now on Telegram. Click here to join our channel and stay updated with the latest news.

Next