Advertisement
ರವಿವಾರ ಸೆಂಟರ್ ಕೋರ್ಟ್‌ನಲ್ಲಿ ನಡೆದ ಫೈನಲ್ ಹೋರಾಟದಲ್ಲಿ ಫೆಡರರ್ ಅವರು ಗಾಯಗೊಂಡಿದ್ದ ಮರಿನ್ ಸಿಲಿಕ್ ಅವರನ್ನು 6-3, 6-1, 6-4 ಸೆಟ್‌ಗಳಿಂದ ಉರುಳಿಸಿದರು. ಇದು ಫೆಡರರ್ ಅವರ 19ನೇ ಗ್ರ್ಯಾನ್ ಸ್ಲಾಮ್ ಪ್ರಶಸ್ತಿಯಾಗಿದೆ. 35ರ ಹರೆಯದ ಫೆಡರರ್ ವಿಂಬಲ್ಡನ್ ಪ್ರಶಸ್ತಿ ಗೆದ್ದ ಅತೀ ಹಿರಿಯ ಪುರುಷ ಆಟಗಾರರಾಗಿದ್ದಾರೆ. 32ರ ಹರೆಯದ ಆರ್ಥರ್ ಆ್ಯಶೆ ಈ ಹಿಂದೆ 1976ರಲ್ಲಿ ಪ್ರಶಸ್ತಿ ಜಯಿಸಿದ್ದರು.
Related Articles
8ನೇ ಬಾರಿಗೆ ಚಾಂಪಿಯನ್ ಆಗುವ ಮೂಲಕ ವಿಂಬಲ್ಡನ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಇದಕ್ಕೂ ಮುನ್ನ ಫೆಡರರ್ 2012ರಲ್ಲಿ ಚಾಂಪಿಯನ್ ಆಗುವ ಮೂಲಕ 7ನೇ ಬಾರಿಗೆ ವಿಂಬಲ್ಡನ್‌ನಲ್ಲಿ ಪ್ರಶಸ್ತಿ ಪಡೆದಿದ್ದರು. ಈ ಮೂಲಕ ಇಂಗ್ಲೆಂಡ್‌ನ ವಿಲಿಯಮ್ ರ್ಯಾನ್ ಶೋ, ಅಮೆರಿಕದ ಪೀಟ್ ಸಾಂಪ್ರಾಸ್ ದಾಖಲೆಯನ್ನು ಸರಿಗಟ್ಟಿದ್ದರು. ಆದರೆ ರವಿವಾರ 8ನೇ ಬಾರಿಗೆ ವಿಂಬಲ್ಡನ್ ಗೆಲ್ಲುವ ಮೂಲಕ ವಿಂಬಲ್ಡನ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಾಗಿ ದಾಖಲೆ ನಿರ್ಮಿಸಿದ್ದಾರೆ.
Advertisement