Advertisement

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯ್ತಿ

07:00 AM Jul 29, 2018 | Team Udayavani |

ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕ ವಿನಾಯ್ತಿ ಸಿಗಲಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement

ಖಾಸಗಿ ಪಾಲಿಟೆಕ್ನಿಕ್‌ಗಳಲ್ಲಿ ಅಥವಾ ಆಡಳಿತ ಮಂಡಳಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳು ಶುಲ್ಕ ವಿನಾಯಿತಿ  ಸೌಲಭ್ಯಕ್ಕೆ ಅರ್ಹರಾಗಿರುವುದಿಲ್ಲ. ಕುಟುಂಬ ಆದಾಯ 2.50 ಲಕ್ಷದಿಂದ 10 ಲಕ್ಷದ ವರೆಗೆ ಇರುವ ವಿದ್ಯಾರ್ಥಿಗಳು ಶುಲ್ಕ ವಿನಾಯ್ತಿಗೆ ಅರ್ಜಿ ಸಲ್ಲಿಸಬಹುದು.  ಆಕ್ಟೋಬರ್‌ 25ರವರೆಗೂ ಅರ್ಜಿ ಸಲ್ಲಿಸಬಹುದು. ಪಾಲಿಟೆಕ್ನಿಕ್‌ ಕಾಲೇಜುಗಳಲ್ಲೇ ಅರ್ಜಿ ಸಂಬಂಧಿಸಿದ ಎಲ್ಲ ಮಾಹಿತಿ ದೊರೆಯಲಿದೆ. ತಹಸೀಲ್ದಾರ್‌ ದೃಢೀಕರಿಸಿರುವ ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಮಾಹಿತಿಗಾಗಿ //dte.kar.nic.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next