Advertisement

‘ಸುಪ್ರೀಂ’ನಿರ್ಧಾರಕ್ಕೆ ಸಂಸದೀಯ ಸಮಿತಿ ಆತಂಕ

09:50 AM Aug 23, 2017 | Karthik A |

ನವದೆಹಲಿ: ಜನಪ್ರತಿನಿಧಿಗಳ ವಿರುದ್ಧ ಆರೋಪ ನಿಗದಿ ಆದ ದಿನದಿಂದಲೇ ಅಂತಹ‌ ವ್ಯಕ್ತಿಯನ್ನು ಚುನಾವಣೆಗೆ ಸ್ಪರ್ಧಿಸಲು ಅನರ್ಹಗೊಳಿಸುವಂತೆ ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಒಂದು ವೇಳೆ ಇದು ಅನುಷ್ಠಾನಕ್ಕೆ ಬಂದರೆ ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇದನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಸಂಸದೀಯ ಸಮಿತಿ ಆತಂಕ ವ್ಯಕ್ತಪಡಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಜಕೀಯ ಪಕ್ಷಗಳನ್ನು ಕೋರಿದೆ.

Advertisement

ಸುಪ್ರೀಂಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ರಾಜಕೀಯ ಪಕ್ಷಗಳಿಗೆ ರವಾನಿಸಿರುವ ಸಮಿತಿಯು, ಈ ಕುರಿತು ವಿವರಣೆ ನೀಡುವಂತೆ ತಿಳಿಸಿದೆ. ಚುನಾವಣೆ ಸುಧಾರಣೆಗಾಗಿ ಪ್ರಸ್ತುತ ಈ ಸಮಿತಿಯನ್ನು ರಚಿಸಲಾಗಿದೆ. ನ್ಯಾಯಾಲಯದಲ್ಲಿ ಆರೋಪಿಯು ದೋಷಿ ಎಂಬುದು ಸಾಬೀತಾದರೆ ಅಂತಹ ವ್ಯಕ್ತಿಗಳು ನಿರ್ದಿಷ್ಟ ಅವಧಿಯವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹನಾಗುತ್ತಾರೆ ಎಂದು 2013ರಲ್ಲಿ ಸುಪ್ರೀಂ ತೀರ್ಪಿತ್ತಿದೆ. ಈ ತೀರ್ಪಿನನ್ವಯ ಬಿಹಾರ ಮಾಜಿ ಸಿಎಂ ಲಾಲು ಮತ್ತಿತರರು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next