Advertisement

ಹಳಿಯಾಳದಲ್ಲಿ ಕೋವಿಡ್ ವಾರಿಯರ್ಸ್ ಗೆ ಸನ್ಮಾನ

05:18 PM Jul 08, 2020 | Suhan S |

ಹಳಿಯಾಳ: ಭಯೋತ್ಪಾದಕರು, ಶತ್ರುಗಳನ್ನು ಬಂದೂಕು, ಬಾಂಬ್‌ ನಿಂದ ನಾಶ ಮಾಡಬಹುದು. ಆದರೆ ಸದ್ಯಕ್ಕೆ ಕೋವಿಡ್ ಮಹಾಮಾರಿ ನಿಯಂತ್ರಣ ಸಾಧ್ಯವಿಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಘೋಕ್ಲೃಕರ, ಕೋವಿಡ್ ದಿಂದ ಬಚಾವಾಗಲು ಎಲ್ಲರೂ ಮಾಸ್ಕ್, ಸ್ಯಾನಿಟೈಸರ್‌, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕೆಂದು ಕರೆ ನೀಡಿದ್ದಾರೆ.

Advertisement

ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿಯ ಸಭಾಂಗಣದಲ್ಲಿ ಕೆಡಿಸಿಸಿ ಬ್ಯಾಂಕ್‌ ಶಿರಸಿ ಮತ್ತು ಹಳಿಯಾಳ- ದಾಂಡೇಲಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಚೆಕ್‌ ವಿತರಣೆ ಮತ್ತು ಎಲ್ಲ ಇಲಾಖೆ ಅಧಿಕಾರಿಗಳು, ಕೋವಿಡ್ ವಾರಿಯರ್ಸ್ ಗಳಿಗೆ ನಡೆದ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್‌-19 ನಿಯಂತ್ರಣಕ್ಕಾಗಿ ಆಶಾ, ಅಂಗನವಾಡಿ ಕಾರ್ಯಕರ್ತರು, ಪೊಲೀಸ್‌, ಕಂದಾಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಿರಂತರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿ.ಪಂ ಉಪಾಧ್ಯಕ್ಷ ಸಂತೊಷ ರೇಣಕೆ, ಕೆಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌.ಪಿ. ಚವ್ವಾಣ, ತಹಶೀಲ್ದಾರ್‌ ವಿದ್ಯಾಧರ ಗುಳಗುಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಲೆಫ್ಟ್ ನೆಂಟ್‌ ಹುದ್ದೆಪಡೆದಿರುವ ತಾಲೂಕಿನ ಹಂದಲಿ ಗ್ರಾಮದ ಯುವ ಸೈನಿಕ ಪ್ರಕಾಶ ಶಿಡ್ಲಾನಿ ಅವರಿಗೆ ಗೌರವಿಸಲಾಯಿತು.

ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ ಘೋಕ್ಲೃಕರ್‌, ಸಹಕಾರ ಯೂನಿಯನ್‌ ಉಪಾಧ್ಯಕ್ಷ ಶಿವಪುತ್ರಪ್ಪಾ ನುಚ್ಚಂಬ್ಲಿ, ನಾಗಶೇಟ್ಟಿಕೊಪ್ಪ ಸೇವಾ ಸಹಕಾರಿ ಸಂಘದ ಅಧ್ಯಕ್ಷ ತುಕಾರಾಮ ಗೌಡಾ, ತಾಪಂ ಅಧಿಕಾರಿ ಪ್ರವೀಣಕುಮಾರ ಸಾಲಿ, ತಾಲೂಕು ಆರೋಗ್ಯಾಧಿಕಾರಿ ಡಾ| ರಮೇಶ ಕದಂ, ಕೆಇಬಿ ಅಧಿಕಾರಿ ರವೀಂದ್ರ ಮೆಟಗುಡ್ಡ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next