ಕೋಯಿಕ್ಕೋಡ್ (ಕೇರಳ): ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಮೌಂಟೇನ್ ಪಾಸ್ ನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೇ 30 ರಂದು ತಾಮರಸ್ಸೆರಿಯಿಂದ ಘಟನೆ ವರದಿಯಾಗಿದ್ದು, ಪ್ರಕರಣದ ಆರೋಪಿಯನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಮತ್ತು ಘಟನೆಯಲ್ಲಿ ಹೆಚ್ಚಿನ ಜನರು ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ:Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ
Related Articles
ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಕೋಝಿಕ್ಕೋಡ್‌ಗೆ ಸಂಪರ್ಕಿಸುವ ತಾಮರಸ್ಸೆರಿ ಚುರಂ (ಮೌಂಟೇನ್ ಪಾಸ್) ನಲ್ಲಿ ಅತ್ಯಾಚಾರವೆಗಿ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ತಾಮರಸ್ಸೆರಿ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ಕಾಲೇಜು ಬಳಿ ಪೇಯಿಂಗ್ ಗೆಸ್ಟ್ ಆಗಿ ಉಳಿದುಕೊಂಡಿದ್ದ ಯುವತಿ ಮೇ 30 ರಂದು ತನ್ನ ಮನೆಗೆ ತೆರಳಿದ್ದಳು. ಆದರೆ ಆಕೆ ಮನೆಗೆ ತಲುಪದ ಕಾರಣದಿಂದ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ಪ್ರಗತಿಯಲ್ಲಿದ್ದಂತೆ, ಯವತಿ ತನ್ನ ಕುಟುಂಬ ಸದಸ್ಯರನ್ನು ಸಂಪರ್ಕಿಸಿದ್ದು, ಬಳಿಕ ಆಕೆಯನ್ನು ರಕ್ಷಿಸಲಾಯಿತು.