Advertisement
ಕಳೆದ 15 ದಿನಗಳ ಹಿಂದೆ ಜಿಲ್ಲಾಧಿಕಾರಿಯಾಗಿ ಎಸ್.ಅಶ್ವಥಿ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡಾ.ಎಂ. ಅಶ್ವಿನಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶಹೊರಡಿಸಿದೆ.
Related Articles
Advertisement
ಜಿಲ್ಲೆಯಲ್ಲಿ ಮಹಿಳಾ ಅಧಿಕಾರಿಗಳ ಜತೆಗೆ ಮಹಿಳಾ ಜನಪ್ರತಿನಿಧಿಗಳು ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಸಂಸದೆ ಸುಮಲತಾ, ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ, ಉಪಾಧ್ಯಕ್ಷೆ ಗಾಯಿತ್ರಿ ರೇವಣ್ಣ, ಮಂಡ್ಯ ತಾಪಂ ಅಧ್ಯಕ್ಷೆ ಶಿವಕುಮಾರಿ, ನಗರಸಭೆ ಉಪಾಧ್ಯಕ್ಷ ಇಶ್ರತ್ ಫಾತೀಮಾ, ಮದ್ದೂರು ಪುರಸಭೆ ಉಪಾಧ್ಯಕ್ಷೆ ಸುಮಿತ್ರ, ಮಳವಳ್ಳಿ ಪುರಸಭೆ ಅಧ್ಯಕ್ಷೆ ರಾಧಾ ನಾಗರಾಜು, ಮದ್ದೂರು ತಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ, ಶ್ರೀರಂಗಪಟ್ಟಣ ತಾಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನಂದಾಮಣಿ, ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷೆ ನಿರ್ಮಲಾ, ನಾಗಮಂಗಲ ಪುರಸಭೆ ಅಧ್ಯಕ್ಷೆ ಆಶಾ ಸೇರಿದಂತೆ ವಿವಿಧ ಆಡಳಿತ ಮಂಡಳಿಗಳಲ್ಲೂ ಮಹಿಳಾ ಸದಸ್ಯರೇ ಹೆಚ್ಚಾಗಿದ್ದಾರೆ.
ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಮೇಲುಗೈ :
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಆಯ್ಕೆಯಾಗಿದ್ದಾರೆ. ಕಳೆದ ಬಾರಿಯೂ ಗ್ರಾಪಂ ಚುನಾವಣೆಯಲ್ಲಿ ಮಹಿಳಾ ಸದಸ್ಯರಿದ್ದರು. ಅಲ್ಲದೆ, ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಲ್ಲೂ ಮಹಿಳೆಯರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಗ್ರಾಪಂ ಆಡಳಿತ ನಡೆಸಲು ಸಜಾjಗಿದ್ದಾರೆ.
ಎಸ್‌ಪಿ ಪರಶುರಾಮ ವರ್ಗಾವಣೆ :
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕೆ.ಪರಶುರಾಮ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನೂತನ ಎಸ್‌ಪಿಯಾಗಿ ಡಾ.ಎಂ.ಅಶ್ವಿನಿ ಅವರನ್ನು ನೇಮಕ ಮಾಡಿದೆ. ಬೆಂಗಳೂರಿನ ಗುಪ್ತಚರ ಇಲಾಖೆಯ ಉಪ ಆಯುಕ್ತರಾಗಿದ್ದ ಡಾ.ಎಂ.ಅಶ್ವಿನಿ ಅವರನ್ನು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ. ಇನ್ನು ಕೆ.ಪರಶುರಾಮ ಅವರನ್ನು ಬೆಂಗಳೂರಿನ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷರನ್ನಾಗಿ ನಿಯೋಜಿಸಿದೆ.
-ಎಚ್.ಶಿವರಾಜು