ಬೆಂಗಳೂರು: ಅನಾರೋಗ್ಯಕ್ಕೊಳಗಾಗಿದ್ದ ಮಹಿಳಾ ಪ್ರೊಫೆಸರ್‌ವೊಬ್ಬರು ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜ್ಞಾನಜ್ಯೋತಿನಗರದ ಕದಂಬ ಲೇಔಟ್‌ನ ಚೈತ್ರಾ(41) ಮೃತ ಪ್ರೊಫೆಸರ್. ಚೈತ್ರಾ 28 ವರ್ಷಗಳ ಹಿಂದೆ ಗುರುಪ್ರಸಾದ್ ಎಂಬುವರ ಜತೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಇಬ್ಬರು ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಜಿ.ಟಿ. ಗುರುಪ್ರಸಾದ್
ಹಾವೇರಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿದ್ದಾರೆ. ಚೈತ್ರಾ ಅವರು ಕೆಂಗೇರಿಯ ಉತ್ತರಹಳ್ಳಿಯಲ್ಲಿರುವ ಎಸ್‌ಜೆಬಿಐಟಿ ಬಿಒ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ಎರಡು ತಿಂಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಜತೆಗೆ ಕಂದಬ ಲೇಔಟ್‌ನ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಭಾನುವಾರ ಬೆಳಗ್ಗೆ ಗುರುಪ್ರಸಾದ್ ಪತ್ನಿಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸಿಲ್ಲ. ಸೋಮವಾರ ಮುಂಜಾನೆ ಕೂಡ ಕರೆ ಸ್ವೀಕರಿಸಿಲ್ಲ. ಬಳಿಕ ಸ್ಥಳೀಯರು ಮನೆಯ ಬಾಗಿಲು ಹೊಡೆದು ನೋಡಿದಾಗಮೂರನೇ ಮಹಡಿಯ ಕೊಠಡಿಯಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ
ಅನಾರೋಗ್ಯವೇ ಕಾರಣ ಎಂಬುದು ಗೊತ್ತಾಗಿದೆ. ಸದ್ಯ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.