Advertisement

 ಪುರಭವನದಲ್ಲಿ ಸ್ತ್ರೀಶಕ್ತಿ ಸಮಾವೇಶ

09:45 AM Nov 19, 2017 | |

ಹಂಪನಕಟ್ಟೆ: ಮಹಿಳೆಯರ ನ್ಯಾಯಯುತ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಲು ಸಂಘಟನೆಗಳ ಪಾತ್ರ ಹಿರಿದು ಎಂದು ಮೇಯರ್‌ ಕವಿತಾ ಸನಿಲ್‌ ಹೇಳಿದರು.

Advertisement

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಸ್ತ್ರೀಶಕ್ತಿ ಗುಂಪುಗಳ ವತಿಯಿಂದ ನಗರದ ಪುರಭವನದಲ್ಲಿ ನಡೆದ ಮಕ್ಕಳ ದಿನಾಚರಣೆ, ಸ್ತ್ರೀಶಕ್ತಿ ಸಮಾವೇಶ ಹಾಗೂ ಶಾಸಕರಿಂದ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಪಾಲಿಕೆ ಸಹಕರಿಸುತ್ತಿದೆ. ಅಂಗನವಾಡಿ ಕಟ್ಟಡಗಳನ್ನು ಪಾಲಿಕೆಯಿಂದ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಂಘಗಳಿಗೆ ಅನುದಾನ
350ಕ್ಕೂ ಹೆಚ್ಚು ಸ್ವಸಹಾಯ ಸಂಘಗಳಿಗೆ ತಲಾ 10,000 ರೂ.ಗಳಂತೆ ಪಾಲಿಕೆಯಿಂದ ಅನುದಾನ ನೀಡಲಾಗುತ್ತಿತ್ತು. ಪ್ರಸಕ್ತ ಸಂಖ್ಯೆಯನ್ನು 400ಕ್ಕೆ ಏರಿಸಲಾಗಿದೆ. ಮಹಿಳಾ ಅಭ್ಯುದಯದ ದೃಷ್ಟಿಕೋನವನ್ನಿಟ್ಟು ಇದನ್ನು ಒದಗಿಸಲಾಗುತ್ತಿದೆ ಎಂದರು. ದಿಯಾ ಸಿಸ್ಟಮ್ಸ್‌ನ ಸಿಇಒ ಡಾ| ವಿ. ರವಿಚಂದ್ರನ್‌, ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು. ಸೆಲ್ಕೋ ಫೌಂಡೇಶನ್‌ನ ಯೋಜನಾ ಸಂಯೋಜಕ ಎಲ್ರಿಕ್‌, ಗುಲಾಬಿ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

ಐಪ್ಯಾಡ್‌ ಟ್ಯಾಬ್‌ಗಳನ್ನು ಈ ವೇಳೆ ಸಂಘದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ
ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷೆ ಜಯಲಕ್ಷ್ಮೀ ಬಿ. ಆರ್‌. ಪ್ರಸ್ತಾವನೆಗೈದರು. ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಪ್ರಭಾರ) ಶೋಭಾ ಪಿ. ಸ್ವಾಗತಿಸಿದರು.

Advertisement

ಹಣ ಬಿಡುಗಡೆಗೆ ಯತ್ನ
ಸ್ವಂತ ನಿವೇಶನ ಹೊಂದಿರುವ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು. ಪ್ರತಿಭಟನೆಯಲ್ಲಿ ಭಾಗವಹಿಸಿದ ಅಂಗನವಾಡಿ ಕಾರ್ಯಕರ್ತರ ಸಂಬಳ ಕಡಿತಗೊಳಿಸಿದ ಕ್ರಮ ಸಮಂಜಸವಲ್ಲ. ಅವರ ಹಣವನ್ನು ತತ್‌ಕ್ಷಣ ಬಿಡುಗಡೆಗೊಳಿಸುವಂತೆ ಸಂಬಂಧಪಟ್ಟವರಲ್ಲಿ ಚರ್ಚಿಸಲಾಗುವುದು.
ಜೆ.ಆರ್‌. ಲೋಬೋ
   ಶಾಸಕರು

Advertisement

Udayavani is now on Telegram. Click here to join our channel and stay updated with the latest news.

Next