Advertisement

ಕಲಬುರಗಿ ಜಿಲ್ಲೆಯಲ್ಲಿ ರಥೋತ್ಸವ,ಜಾತ್ರೆ: ವಿವರಣೆ ಕೋರಿದ ಹೈಕೋರ್ಟ್‌

10:56 PM Apr 24, 2020 | Sriram |

ಬೆಂಗಳೂರು: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕು ರಾವೂರು ಗ್ರಾಮದ ಸಿದ್ದಲಿಂಗೇಶ್ವರ ರಥೋತ್ಸವ ಸಹಿತ ಜಿಲ್ಲೆಯ ಇನ್ನರೆಡು ಕಡೆ ನಡೆದ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಆಯೋಜಕರ ವಿರುದ್ಧ ವಿಪತ್ತು ನಿರ್ವಹಣ ಕಾಯ್ದೆ-2005ರಡಿ ಯಾಕೆ ಎಫ್‌ಐಆರ್‌ ದಾಖಲಿಸಿಕೊಂಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶ ನೀಡಿದೆ.

Advertisement

ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಪಿಐಎಲ್‌ನ ವಿಚಾರಣೆ ನಡೆಸಿದ ವಿಭಾ ಗೀಯ ನ್ಯಾಯಪೀಠ ಈ ನಿರ್ದೇಶ ನೀಡಿತು. ವಿಚಾರಣೆ ವೇಳೆ ಸರಕಾರದ ಪರ ವಕೀಲರು ಲಿಖೀತ ವಾದ ಮಂಡಿಸಿ, ಲಾಕ್‌ಡೌನ್‌ ಅವಧಿಯಲ್ಲಿ ಧಾರ್ಮಿಕ ಜಾತ್ರೆ, ಉತ್ಸವಗಳನ್ನು ತಡೆಯಲು ಜಿಲ್ಲಾಧಿಕಾರಿಗಳು ವಲಯ ಮ್ಯಾಜಿಸ್ಟ್ರೇಟ್‌ಗಳನ್ನು ನೇಮಕ ಮಾಡಿ ಎ. 9ರಂದು ಆದೇಶ ಹೊರಡಿಸಿದ್ದಾರೆ. ರಾವೂರು ಗ್ರಾಮದ ರಥೋತ್ಸವ ಸಂಬಂಧ ಸ್ಥಳೀಯ ಗ್ರಾಮ ಲೆಕ್ಕಿಗರ ದೂರು ಆಧರಿಸಿ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮಠದ ಕಾರ್ಯದರ್ಶಿ ಸಹಿತ 22 ಮಂದಿಯನ್ನು ಬಂಧಿಸಲಾಗಿದೆ.

ಇದಲ್ಲದೆ ವಲಯ ಮ್ಯಾಜಿಸ್ಟ್ರೇಟ್‌ ಅವರನ್ನು ಅಮಾನತುಗೊಳಿಸಲಾಗಿದ್ದು, ಸಂಬಂಧಪಟ್ಟ ಉಪವಿಭಾಗಾಧಿಕಾರಿ, ತಹಶೀಲ್ದಾರ್‌, ಗ್ರಾಮ ಲೆಕ್ಕಿಗ, ಕಂದಾಯ ನಿರೀಕ್ಷಕರಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಅದಕ್ಕೆ ರಾವೂರು ಸಹಿತ ಇನ್ನುಳಿದ ಎರಡು ಕಡೆ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂ ಸಿ ರಥೋತ್ಸವ, ಜಾತ್ರೆ ನಡೆಸಿದ ತಪ್ಪಿತಸ್ಥರ ವಿರುದ್ದ ವಿಪತ್ತು ನಿರ್ವಹಣ ಕಾಯ್ದೆ-2005ರಡಿ ಯಾಕೆ ಎಫ್‌ಐಆರ್‌ ದಾಖಲಿಸಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶ ನೀಡಿ ವಿಚಾರಣೆ ಮುಂದೂಡಿತು.

ರಾಜ್ಯ ಸರಕಾರದ ಅಧ್ಯಾದೇಶಕ್ಕೆ ಆಕ್ಷೇಪ
ಕೋವಿಡ್-19 ವಾರಿಯರ್ಸ್‌ ಮೇಲೆ ಹಲ್ಲೆ ನಡೆಯುವುದನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೆ ತಂದಿರುವ ಅಧ್ಯಾದೇಶ ಕೇಂದ್ರದ ಅಧ್ಯಾದೇಶಕ್ಕೆ ತದ್ವಿರುದ್ಧವಾಗಿದೆಯಲ್ಲದೆ ದುರ್ಬಲವಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.ವಕೀಲ ಜಿ.ಆರ್‌. ಮೋಹನ್‌ ಸಲ್ಲಿಸಿರುವ ಈ ಪಿಐಎಲ್‌ನ್ನು ಎ.28ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್‌ ತಿಳಿಸಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next