Advertisement

ಗುರು ಮಾರ್ಗದರ್ಶನದಲ್ಲಿ ಗುರಿ ಸಾಧಿಸಿ

04:25 PM Sep 13, 2020 | Suhan S |

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತುಮೈಗೂಡಿಸಿಕೊಂಡು ಗುರುವಿನ ಮಾರ್ಗದರ್ಶನದಲ್ಲಿ ಗುರಿ ಸಾಧಿಸಬೇಕೆಂದು ಶಿಡ್ಲಘಟ್ಟದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶ್ರೀ ನಿವಾಸ್‌ ಅಭಿಪ್ರಾಯಪಟ್ಟರು.

Advertisement

ಜಿಲ್ಲೆಯ ಶಿಡ್ಲಘಟ್ಟ ನಗರದ ಡಾಲ್ಫಿನ್‌ ಪಬ್ಲಿಕ್‌ ಶಾಲೆಯಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿಒಕ್ಕೂಟದಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದು, ಶಿಡ್ಲಘಟ್ಟವು 40 ರೊಳಗಿನ ಸ್ಥಾನ ಪಡೆದುಕೊಂಡಿದೆಎಂದು ಸಂತಸ ಹಂಚಿಕೊಂಡರು.ಡಾಲ್ಫಿನ್‌ ವಿದ್ಯಾಸಂಸ್ಥೆಯ ಎಂಡಿ ಎನ್‌.ಅಶೋಕ್‌ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪೋಷಕರ, ಹಿರಿಯರ ಹಾಗೂ ಶಿಕ್ಷಕರ ಹಿತ ನುಡಿಗಳನ್ನು ಕೇಳಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಆಗಲೆ ಬದುಕು ಸರಿಯಾದ ದಾರಿಯಲ್ಲಿ ಸಾಗುತ್ತದೆ. ಇಲ್ಲವಾದಲ್ಲಿ ಇಲ್ಲ ಎಂದರು.

ಸರ್ಕಾರಿ, ಅನುದಾನರಹಿತ ಹಾಗೂ ಅನುದಾನಿತ ಶಾಲೆಗಳ ಎಸ್‌ಎಸ್‌ಎಲ್‌ಸಿ ದ್ವಿತೀಯ ಪಿಯುಸಿಯ 90 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಂದಾಯ ಇಲಾಖೆಯ ಶಿರಸ್ತೇದಾರ್‌ ಕೆ.ಎನ್‌.ಎಂ. ಮಂಜುನಾಥ್‌, ಇಸಿಒ ಭಾಸ್ಕರ್‌ಗೌಡ, ಮುಖ್ಯ ಶಿಕ್ಷಕ ಎನ್‌.ಮುನಿಯಪ್ಪ, ಎನ್‌ಎಸ್‌ಯುಐನ ರಾಜ್ಯ ಸಂಚಾ ಲಕ ಕುಂದಲಗುರ್ಕಿ ಮುನೀಂದ್ರ, ತಾಲೂಕು ಸಂಚಾಲಕ ಆಫ್ರೀದ್‌ ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next