Advertisement

Feticide: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ಪತ್ತೆ

12:51 AM Sep 07, 2024 | Team Udayavani |

ಬಾಗಲಕೋಟೆ: ಮೂರು ತಿಂಗಳ ಹಿಂದೆ ನಡೆದ ಹೆಣ್ಣು ಭ್ರೂಣಹತ್ಯೆ ಪ್ರಕರಣ ಸದ್ದು ತಣ್ಣಗಾಗುವ ಮುನ್ನವೇ ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ ಪ್ರಕರಣ ನಡೆದಿದೆ.

Advertisement

ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಪಾಟೀಲ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಪತ್ತೆಯಾಗಿದ್ದು, ವೈದ್ಯರ ಕೊಠಡಿ, ಶಸ್ತ್ರಚಿಕಿತ್ಸೆ ಕೊಠಡಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮಹಾಲಿಂಗಪುರದ ಪಾಟೀಲ ಆಸ್ಪತ್ರೆಯಲ್ಲಿ ಮುಧೋಳ ತಾಲೂಕಿನ ರನ್ನಬೆಳಗಲಿಯ 24ರ ಹರೆಯದ ಮಹಿಳೆಯ 14 ವಾರಗಳ ಭ್ರೂಣ ಹತ್ಯೆ ಮಾಡಲಾಗಿದೆ. ಆದರೆ ಗರ್ಭಪಾತ ಮಾಡಿಸಿದಾಗ ಅದು ಗಂಡು ಮಗು ಎಂದು ತಿಳಿದು ಬಂದಿದೆ ಎನ್ನಲಾಗಿದೆ.

ಭ್ರೂಣಹತ್ಯೆ: 10 ಮಂದಿ ಸೆರೆ, ನಾಲ್ವರಿಗೆ ಶೋಧ
ಮಂಡ್ಯ,: ಪಾಂಡವಪುರ ಪಟ್ಟಣದ ಆರೋಗ್ಯ ಇಲಾಖೆಯ ವಸತಿ ಗೃಹದಲ್ಲಿ ನಡೆಯುತ್ತಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣ ಹಾಗೂ ದೇವೇಗೌಡನಕೊಪ್ಪಲಿನ ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡವಪುರ ಪೊಲೀಸರು ಗುರುವಾರ ಬಂಧಿಸಿರುವ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಎರಡು ಪ್ರಕರಣಗಳಲ್ಲಿ ಒಟ್ಟು 31 ಮಂದಿ ಆರೋಪಿಗಳಿದ್ದು, ಈವರೆಗೆ 27 ಮಂದಿಯನ್ನು ಬಂಧಿಸಲಾಗಿದೆ. ಉಳಿದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next