Advertisement

ನಗರಾದ್ಯಂತ ಜ್ವರ ತಪಾಸಣಾ ಕೇಂದ್ರ

06:22 AM Jul 08, 2020 | Lakshmi GovindaRaj |

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳು ಹಾಗೂ ಜ್ವರ ತಪಾಸಣಾ ಕೇಂದ್ರಕ್ಕೆ ನಿತ್ಯ ಸಾವಿರಕ್ಕೂ ಅಧಿಕ ಜನ ಭೇಟಿ ನೀಡುತ್ತಿರುವ ಹಿನ್ನೆಲೆ ಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ  ಹಾಗೂ ರೆಫ‌ರಲ್‌ ಆಸ್ಪತ್ರೆಗಳಲ್ಲಿ ಜ್ವರ ತಪಾಸಣಾ ಕೇಂದ್ರ ತೆರೆಯಲು ಬಿಬಿಎಂಪಿ ಮುಂದಾಗಿದೆ.

Advertisement

ನಗರದಲ್ಲಿ ಕೋವಿಡ್‌ 19 ಸೋಂಕಿನ ಲಕ್ಷಣ ಇರುವವರ ಗಂಟಲು ದ್ರವದ ಮಾದರಿಯ ಸಂಗ್ರಹಣೆ ಮತ್ತು ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲು ಜ್ವರ ಚಿಕಿತ್ಸಾಲಯಗಳ ಸಂಖ್ಯೆ ಹೆಚ್ಚಿಸಬೇಕಾಗಿದ್ದು, ಬಿಬಿಎಂಪಿ ವ್ಯಾಪ್ತಿಯ 133 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಆರು ರೆಫ‌ರಲ್‌ ಆಸ್ಪತ್ರೆಗಳನ್ನು ಜ್ವರ ತಪಾಸಣಾ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.

ಈ  ಚಿಕಿತ್ಸಾಲಯಗಳಲ್ಲಿ ಶಂಕಿತ ಸೋಂಕಿತರ ಗಂಟಲು ದ್ರವ ಮಾದರಿ ಸಂಗ್ರಹಣೆ ಮಾಡಲಾಗುತ್ತದೆ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ತಿಳಿಸಿದರು. ಈ ಕೇಂದ್ರಗಳಲ್ಲಿ ತಪಾಸಣೆಗೆ ಒಳಗಾಗುವವರ  ಗಂಟಲು ದ್ರವದ  ಮಾದರಿಯನ್ನು ನಿಗದಿಪಡಿಸಿದ ಕೋವಿಡ್‌ -19 ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಚಿಕಿತ್ಸಾಲಯಗಳಲ್ಲಿ ಸಂಗ್ರಹಿಸಿದ ಗಂಟಲು ದ್ರವದ ಪರೀಕ್ಷಾ ವೆಚ್ಚವನ್ನು ಪಾಲಿಕೆಯೇ ಭರಿಸಲಿದೆ  ಎಂದರು.

ನಗರದ ಜ್ವರ ತಪಾಸಣಾ ಕೇಂದ್ರಗಳಲ್ಲಿ ಕೋವಿಡ್‌ 19 ಸೋಂಕಿನ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ಉಸಿರಾಟ ದ ಸಮಸ್ಯೆ ಎದುರಿಸುತ್ತಿರುವವರಿಗೆ ಚಿಕಿತ್ಸೆ ನೀಡಲಾಗು ತ್ತಿದೆ. ಈ ಕೇಂದ್ರಗಳಿಂದ ಶೀತ ಸಂಬಂಧಿತ ಕಾಯಿಲೆಗ  ಳಿಂದ ಬಳಲುತ್ತಿರುವ ವ್ಯಕ್ತಿಗಳ ತಪಾಸಣೆ ನಡೆಸಿ, ಸೋಂಕು ಪ್ರಕರಣ ಪತ್ತೆಹಚ್ಚಲು ಸಹಕಾರಿಯಾಗಿದೆ. 20ಸಾವಿರಕ್ಕೂ ಹೆಚ್ಚು ತಪಾಸಣೆ ನಡೆದಿದೆ ಎಂದರು.

ಸೇವಾ ಸಮಯ: ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ನಿತ್ಯ  ಗಂಟಲು ಮಾದರಿ ದ್ರವದ ಪರೀಕ್ಷೆಗೆ ಟೋಕನ್‌ ವಿತರಿಸುವ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತಪಾಸಣೆ ನಡೆಯಲಿದ್ದು, ಶುಲ್ಕ ಇರುವುದಿಲ್ಲ ಎಂದು ಹೇಳಿದರು.

Advertisement

ಬಿಬಿಎಂಪಿ ಕಚೇರಿಗೆ ಪ್ರವೇಶ ನಿಷೇಧ: ಬಿಬಿಎಂಪಿಯ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಕೋವಿಡ್‌ 19 ಸೋಂಕು ದೃಢಪಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರಿಂದ ಜುಲೈ 24ರ ವರೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ  ಕಚೇರಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಆದೇಶ ಮಾಡಿದ್ದಾರೆ. ಸಾರ್ವಜನಿಕರ ಸೇವೆಗೆ ಆನ್‌ಲೈನ್‌ ಅವಕಾಶ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next